
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಕಿದಿಯೂರು ಇವರ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಿದಿಯೂರು ಶ್ಯಾಮಿಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜ್ ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಲ್ಪೆ ಆರಕ್ಷಕ ಠಾಣೆಯ ಠಾಣಾಧಿಕಾರಿ ಗಂಗಪ್ಪ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ಕಛೇರಿಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಸಂಪನ್ಮೂಲ ವ್ಯಕ್ತಿಯಾಗಿ ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಹಾಗೂ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಜಯಶ್ರೀ , ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಲೂಕು ಕೃಷಿ ಅಧಿಕಾರಿ ಮಂಜುನಾಥ್ ಸ್ವಾಗತಿಸಿದರು. ಅಂಬಲಪಾಡಿ ವಲಯ ಮೇಲ್ವಿಚಾರಕಿ ಪ್ರೇಮ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಲಲಿತಾ ವಂದಿಸಿದರು.