
ಹಿರಿಯಡ್ಕ: ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡ್ಕದಲ್ಲಿ ಶೈಕ್ಷಣಿಕ ಚಟುವಟಿಕೆಗಳು ಗರಿಗೆದರಿವೆ. ಜುಲೈ 12, 2025, ಶನಿವಾರದಂದು, ಹಿರಿಯಡ್ಕದ ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಬೆಳಿಗ್ಗೆ 10.00 ಗಂಟೆಗೆ ಶಾಲಾ ಸಂಸತ್ತಿನ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ಅದ್ಧೂರಿಯಾಗಿ ಜರುಗಲಿದೆ. ಈ ಸಮಾರಂಭದ ನಂತರ ಶಾಲೆಯಲ್ಲಿ ಹೊಸದಾಗಿ ಪ್ರಾರಂಭಿಸಲಾಗಿರುವ ಸ್ಪೋಕನ್ ಇಂಗ್ಲಿಷ್ ಕ್ಲಾಸ್‌ನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಬ್ರಹ್ಮಾವರದ ಬಿ.ಆರ್.ಪಿ., ಬಿ.ಆರ್.ಸಿ. ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಯುತ ಉದಯ ಕೋಟ ಅವರು ಭಾಗವಹಿಸಲಿದ್ದಾರೆ. ಇವರು ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ‘ಶಿಕ್ಷಣೋಲ್ಲಾಸ: ಸ್ಫೂರ್ತಿದಾಯಕ ಕಲಿಕೆ – ಶಿಕ್ಷಣ, ಸಾಹಿತ್ಯ, ಸಂಗೀತ’ ಎಂಬ ಮೌಲ್ಯಾಧಾರಿತ ಶೈಕ್ಷಣಿಕ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ. ಈ ಕಾರ್ಯಾಗಾರವು ಶಿಕ್ಷಣ, ಸಾಹಿತ್ಯ ಮತ್ತು ಸಂಗೀತದ ಮೂಲಕ ಸ್ಫೂರ್ತಿದಾಯಕ ಕಲಿಕೆಗೆ ಒತ್ತು ನೀಡಲಿದೆ.
ಶಾಲೆಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಈ ಮಹತ್ವದ ಕಾರ್ಯಕ್ರಮದಲ್ಲಿ ಎಲ್ಲಾ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮುಖ್ಯ ಶಿಕ್ಷಕರು, ಕೆ.ಪಿ.ಎಸ್ ಹಿರಿಯಡ್ಕ, ಅವರು ಪ್ರೀತಿಪೂರ್ವಕವಾಗಿ ವಿನಂತಿಸಿಕೊಂಡಿದ್ದಾರೆ.