ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿ ವೇತನ ವಿತರಣೆ

Date:

spot_img

ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ

110 ವಿದ್ಯಾರ್ಥಿಗಳಿಗೆ 1.22 ಲಕ್ಷ ರೂ ವಿದ್ಯಾರ್ಥಿ ವೇತನ ವಿತರಣೆ

ಕಾರ್ಕಳ: ಕ್ಷತ್ರಿಯ ಮರಾಠ ಸಮಾಜ (ರಿ.) ಕಾರ್ಕಳ, ಇದರ ಆಶ್ರಯದಲ್ಲಿ ರ‍್ಯಾಂಕ್ ವಿಜೇತ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಅದಿತ್ಯವಾರ ನಡೆಯಿತು. ಕ್ಷತ್ರಿಯ ಮರಾಠ ಸಮಾಜದ ಅಧ್ಯಕ್ಷ ಶುಭದರಾವ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಮಾಜದ ಹಿರಿಯರಾದ ಉಮೇಶ್ ರಾವ್ ಉದ್ಘಾಟಿಸಿದರು.

ಕಲಬುರಗಿಯ ಶರಣಬಸವ ವಿಶ್ವವಿದ್ಯಾನಿಲಯದ ಸಂಗೀತ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದ ಶ್ರುತಿ ಸಿಂಧೆ, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 9 ರ‍್ಯಾಂಕ್ ಪಡೆದ ಸಂಪ್ರೀತ್ ಭೋಂಸ್ಲೆ ಮತ್ತು ಎಸ್.ಎಸ್‌.ಎಲ್.ಸಿ ಹಾಗೂ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 20 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಮಾಜದ 110‌ ವಿದ್ಯಾರ್ಥಿಗಳಿಗೆ 1.22 ಲ‌ಕ್ಷ‌ ರೂ ವಿದ್ಯಾರ್ಥಿ ವೇತನ ಮತ್ತು ಕೊಡೆಗಳನ್ನು ವಿತರಿಸಲಾಯಿತು.

ಶೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ‌ ಮಂಡಳಿಯ ವತಿಯಿಂದ ಶುಭದರಾವ್ ಹಾಗೂ ಪುರಸಭಾ ಸದಸ್ಯ ಶಿವಾಜಿ ರಾವ್ ಜಾಧವ್ ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ್ ಗಿರೀಶ್ ರಾವ್, ಕೆ.ಕೆ.ಎಮ್‌.ಪಿ. ತಾಲೂಕು‌ ಘಟಕದ ಅಧ್ಯಕ್ಷ ಕೀರ್ತನ್ ಲಾಡ್, ಪೆರ್ವಾಜೆ ಶಾಲೆಯ ಸಂಗೀತ ಶಿಕ್ಷಕ ಕೃಷ್ಣಪ್ಪ ಶಿಂಧೆ, ಇ-ಲಾಜಿಕ್ಸಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಸಿ.ಇ.ಒ ದಿನೇಶ್ ಶೆಟ್ಟಿ, ಮೊಕ್ತೇಸರರಾದ ರಾಮಚಂದ್ರರಾವ್, ದಯಾನಂದ ಶಿಂಧೆ ಉಪಸ್ಥಿತರಿದ್ದರು

ಕಾರ್ಯದರ್ಶಿ ಪ್ರಸನ್ನ ಸ್ವಾಗತಿಸಿದರು, ಶಿಕ್ಷಕಿ ಆಶಾಲತಾ ಗಿರೀಶ್ ವಿದ್ಯಾರ್ಥಿಗಳ ವಿವರ ವಾಚಿಸಿದರು, ಪ್ರಕಾಶ್ ರಾವ್ ಸಾಣೂರು ಧನ್ಯವಾದವಿತ್ತರು. ಶಿಕ್ಷಕ ಹರೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.