spot_img

ಕುದುರೆಮುಖ ವನ್ಯಜೀವಿ ವಿಭಾಗವು 1,221 ಕಿ. ಮೀ. ಬೆಂಕಿ ರೇಖೆ ನಿರ್ಮಾಣಕ್ಕೆ ಮುಂದಾಗಿದೆ

Date:

ಕಾರ್ಕಳ: ಪಶ್ಚಿಮಘಟ್ಟದ ಜೀವ ವೈವಿಧ್ಯಮಯ ಪರಿಸರವನ್ನು ರಕ್ಷಿಸಲು ಕುದುರೆಮುಖ ವನ್ಯಜೀವಿ ವಿಭಾಗವು ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಚಾರ್ಮಾಡಿ ಭಾಗದ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಕುದುರೆಮುಖ, ಆಗುಂಬೆ ಪ್ರದೇಶದಲ್ಲಿ ಆತಂಕ ಮೂಡಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುತ್ತಿದ್ದಾರೆ.

ಈ ಭಾಗದಲ್ಲಿ 1,221 ಕಿ. ಮೀ. ಬೆಂಕಿ ರೇಖೆ ನಿರ್ಮಾಣವಾಗಿದ್ದು, 900 ಕಿ. ಮೀ. ಕಾರ್ಯ ಪೂರ್ಣಗೊಂಡಿದ್ದು, ಉಳಿದ ಭಾಗದಲ್ಲಿ ಜ. 31ರೊಳಗೆ ಕಾರ್ಯ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಬೆಂಕಿ ರೇಖೆ ನಿರ್ಮಾಣಕ್ಕಾಗಿ ಕಾಡು ಸುತ್ತಲೂ ಕಳೆಗಿಡ, ಹುಲ್ಲು ಹಾಗೂ ಸಣ್ಣಪುಟ್ಟ ಗಿಡಗಳನ್ನು 8-10 ಮೀಟರ್ ಅಂತರದಲ್ಲಿ ಕತ್ತರಿಸಿ, ಅವುಗಳಿಗೆ ಬೆಂಕಿ ಹಾಕಲಾಗುತ್ತದೆ.

ಕಾರ್ಕಳ ವನ್ಯಜೀವಿ ವಿಭಾಗದಡಿಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಆಗುಂಬೆ-ಸೋಮೇಶ್ವರ ವನ್ಯಜೀವಿ ಧಾಮ ಹಾಗೂ ಕೊಲ್ಲೂರು ಮೂಕಾಂಬಿಕಾ ವನ್ಯಜೀವಿ ಧಾಮಗಳು ಬರುತ್ತವೆ.

ಪರಿಸ್ಥಿತಿ ಕೈಮೀರಿದರೆ ಹೆಲಿಕಾಪ್ಟರ್ ಬಳಕೆ
ಅಗತ್ಯವಿದ್ದರೆ, ಹೆಲಿಕಾಪ್ಟರ್ ಬಳಕೆ ಮಾಡುವ ಅವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಹಾಯವಾಣಿ: 1926
ಅರಣ್ಯ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡರೆ, ಸಾರ್ವಜನಿಕರು ಸಹಾಯವಾಣಿ ನಂಬರ್ 1926ಕ್ಕೆ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ.

  • ಶಿವರಾಮ್ ಬಾಬು, ಡಿಎಫ್‌ಒ, ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.