ವಂಡ್ಸೆ: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಅಗ್ನಿ ಅವಘಡ; ಚಾಲಕ ಪ್ರಾಣಾಪಾಯದಿಂದ ಪಾರು

Date:

spot_img

ಕುಂದಾಪುರ: ತಾಲೂಕಿನ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಸಮೀಪದ ಶಾರ್ಕೆ ಕ್ರಾಸ್ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಚಲಿಸುತ್ತಿದ್ದ ಕಾರೊಂದು ಸಂಪೂರ್ಣ ಸುಟ್ಟು ಕರಕಲಾಗಿದೆ. ಸಮಯಪ್ರಜ್ಞೆ ಮೆರೆದ ಚಾಲಕ ತಕ್ಷಣ ಕಾರಿನಿಂದ ಕೆಳಗಿಳಿದ ಕಾರಣ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಎಂಬುವರು ಈ ಘಟನೆಯಿಂದ ಪಾರಾದವರು. ಬೆಳಿಗ್ಗೆ ಆಲೂರಿಗೆ ತೆರಳಿ ಕೆಲಸ ಮುಗಿಸಿಕೊಂಡು ಸುಮಾರು 10 ಗಂಟೆಯ ವೇಳೆಗೆ ಕುಂದಾಪುರದ ಕಡೆಗೆ ಮರಳುತ್ತಿದ್ದರು. ಈ ವೇಳೆ ವಂಡ್ಸೆ ಸಮೀಪದ ಶಾರ್ಕೆ ಕ್ರಾಸ್ ತಲುಪುತ್ತಿದ್ದಂತೆ ಕಾರಿನ ಎಂಜಿನ್ ಭಾಗದಿಂದ ವಿಚಿತ್ರ ಶಬ್ದದೊಂದಿಗೆ ದಟ್ಟವಾದ ಹೊಗೆ ಹೊರಬರತೊಡಗಿದೆ.

ತಕ್ಷಣವೇ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ ಭಾಸ್ಕರ್ ಆಚಾರ್ ಅವರು ಹೊರಗೆ ಬಂದಿದ್ದಾರೆ. ಅವರು ಕೆಳಗಿಳಿಯುತ್ತಿದ್ದಂತೆಯೇ ಬೆಂಕಿ ಕಾರಿನಾದ್ಯಂತ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಸ್ಥಳೀಯರು ಕೂಡಲೇ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ, ಗಾಳಿಯ ರಭಸಕ್ಕೆ ಬೆಂಕಿ ನಿಯಂತ್ರಣಕ್ಕೆ ಬಾರದೆ ಇಡೀ ವಾಹನ ಅಗ್ನಿಗೆ ಆಹುತಿಯಾಯಿತು.

ಪ್ರಾಥಮಿಕ ಮಾಹಿತಿ ಪ್ರಕಾರ, ಕಾರಿನ ಎಲೆಕ್ಟ್ರಿಕಲ್ ವೈರಿಂಗ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಕೊಲ್ಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.