spot_img

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

Date:

spot_img

ಉಡುಪಿ : ಜಿಲ್ಲೆಯಾದ್ಯಂತ 9/11 ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಸರಕಾರದ ವಿಳಂಬ ಧೋರಣೆಯಿಂದ ಜನಸಾಮಾನ್ಯರು ಅತೀವ ತೊಂದರೆಗೀಡಾಗಿದ್ದು, ಈ ಜ್ವಲoತ ಸಮಸ್ಯೆಯ ಪರಿಹಾರಕ್ಕೆ ಅಗ್ರಹಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಎಲ್ಲಾ ಮೋರ್ಚಾಗಳು ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಜು.28ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಬಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ 25 ಸೆಂಟ್ಸ್ ಸ್ಥಿರಾಸ್ತಿಯ ಏಕ ವಿನ್ಯಾಸ ನಕ್ಷೆಗೆ ಗ್ರಾಮ ಪಂಚಾಯತ್ ನಲ್ಲಿಯೇ ಅನುಮೋದನೆ ಹಾಗೂ 1 ಎಕ್ರೆಯವರೆಗೆ ಆಯಾ ತಾಲೂಕು ಪಂಚಾಯತ್ ಪಂಚಾಯತ್ ಗಳಲ್ಲಿಯೇ ಅನುಮೋದನೆ ದೊರೆಯುವ ವ್ಯವಸ್ಥೆ ಚಾಲ್ತಿಯಲ್ಲಿತ್ತು. ಆದರೆ ಪ್ರಸಕ್ತ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆದೇಶದ ಮೇರೆಗೆ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಎಲ್ಲಾ ಕಡತಗಳನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿರುವ ಗ್ರಾಮಾಂತರ ಪ್ರಾಧಿಕಾರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕಳುಹಿಸಿ ಅನುಮೋದನೆ ಪಡೆಯಬೇಕಾದ ಅವ್ಯವಸ್ಥೆ ಜಾರಿಗೆ ಬಂದಿದೆ. ಈ ಅವೈಜ್ಞಾನಿಕ ಆದೇಶದಿಂದ ಜಿಲ್ಲೆಯಾದ್ಯಂತ ಜನತೆ ಗ್ರಾಮಾಂತರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಗೆ ಅದೆಷ್ಟು ಬಾರಿ ಅಲೆದಾಡಿದರೂ ಸಮಸ್ಯೆಗೆ ಪರಿಹಾರ ದೊರಕುತ್ತಿಲ್ಲ.

ಕಳೆದ ವರ್ಷ ಗ್ರಾಮಾಂತರ ಪ್ರಾಧಿಕಾರದಲ್ಲಿ ಸುಮಾರು ಹತ್ತು ಸಾವಿರದಷ್ಟು ಅರ್ಜಿಗಳು ವಿಲೇವಾರಿಗೊಂಡರೆ ಚಾಲ್ತಿ ವರ್ಷದಲ್ಲಿ ಕೇವಲ ಒಂದು ಸಾವಿರದಷ್ಟು ಅರ್ಜಿಗಳು ಮಾತ್ರ ವಿಲೇವಾರಿಗೊಂಡಿವೆ ಎಂಬ ಮಾಹಿತಿ ಇದೆ. ಗ್ರಾಮಾoತರ ಪ್ರಾಧಿಕಾರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ತಮ್ಮ ಸ್ವಂತ ಸ್ಥಿರಾಸ್ತಿಯಲ್ಲಿ ತಮ್ಮದೇ ಹಣದಲ್ಲಿ ಮನೆ ಕಟ್ಟಲು ಜನತೆ ವರ್ಷಗಳಷ್ಟು ಸಮಯ ಕಾಯಬೇಕಾದ ಅನಿವಾರ್ಯತೆಗೆ ಈ ಜನ ವಿರೋಧಿ ಸರಕಾರದಿಂದ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸದ್ರಿ ಅವ್ಯವಸ್ಥೆಯನ್ನು ಸರಿಪಡಿಸಲು ಪುನಃ ಏಕ ವಿನ್ಯಾಸ ನಕ್ಷೆ ಅನುಮೋದನೆಯ ಜವಾಬ್ದಾರಿಯನ್ನು ಆಯಾ ಗ್ರಾಮ ಪಂಚಾಯತ್ ಗಳಿಗೆ ಮತ್ತು ತಾಲೂಕು ಪಂಚಾಯತ್ ಗಳಿಗೆ ವಹಿಸಿ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಬೇಕು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿರುವ ಎಲ್ಲ ಬಾಕಿ ಅರ್ಜಿಗಳನ್ನು ಕೂಡಲೇ ವಿಲೇವಾರಿಗೊಳಿಸಬೇಕೆಂಬ ಆಗ್ರಹದೊಂದಿಗೆ ಈ ಪ್ರತಿಭಟನೆ ನಡೆಯಲಿದೆ ಎಂದು ಅವರು ತಿಳಿಸಿದರು.

ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜೂನ್ ತಿಂಗಳ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಹಾಗೂ ಫೋಟೋ, ವರದಿ ಅಪ್ಲೋಡ್ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನವನ್ನು ಗಳಿಸಲು ಶ್ರಮಿಸಿರುವ ಎಲ್ಲರನ್ನೂ ಅಭಿನಂದಿಸಿದರು ಹಾಗೂ ಜು.27ರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಮತ್ತು ವರದಿ ಅಪ್ಲೋಡ್ ಪ್ರಕ್ರಿಯೆಯಲ್ಲೂ ಉಡುಪಿ ಜಿಲ್ಲೆ ಪ್ರಥಮ ಸ್ಥಾನಿಯಾಗುವಂತೆ ಎಲ್ಲರೂ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದರು.

ಮಂಡಲ, ಮೋರ್ಚಾ ಸಮಿತಿ ರಚನೆಯ ಬಗ್ಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮಹಾ ಶಕ್ತಿ ಕೇಂದ್ರಗಳ ಸಮಿತಿ ಪುನರ್ ರಚನೆಯ ಬಗ್ಗೆ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಮನ್ ಕೀ ಬಾತ್ ವೀಕ್ಷಣೆ ಪ್ರಗತಿಯ ಕುರಿತು ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಮತ್ತು ಜು.28ರ ಪ್ರತಿಭಟನೆಯ ಪೂರ್ವ ಸಿದ್ಧತೆಗಳ ಬಗ್ಗೆ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು ಮಾಹಿತಿ ನೀಡಿದರು.

ಪಕ್ಷದ ಪ್ರಮುಖರಾದ ರವಿ ಅಮೀನ್ ಬನ್ನಂಜೆ, ಜಿಲ್ಲಾ ಉಪಾಧ್ಯಕ್ಷರುಗಳಾದ ಕಿರಣ್ ಕುಮಾರ್ ಬೈಲೂರು, ಪೆರಣಂಕಿಲ ಶ್ರೀಶ ನಾಯಕ್, ಸುರೇಶ್ ಶೆಟ್ಟಿ ಕಾಡೂರು, ಜಯರಾಮ ಸಾಲ್ಯಾನ್, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಸಹಿತ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಶ್ರೀ ಪುತ್ತಿಗೆ ಮಠದ ಕೆಮುಂಡೆಲು ಶಾಲೆಗೆ ರೋಟರಿ ಸಹಯೋಗದಲ್ಲಿ ಕಲಿಕಾ ಸಾಮಗ್ರಿ ವಿತರಣೆ, ಶಿಕ್ಷಕರಿಗೆ ಸನ್ಮಾನ!

ಶ್ರೀ ಪುತ್ತಿಗೆ ಮಠದ ಕೆಮುಂಡೆಲು ಶಾಲೆಯಲ್ಲಿ 2025ರ ರೋಟರಿ ಸಹಯೋಗದಲ್ಲಿ 'ರವಿ ಸಂತು ಬಳಗ ಬೆಂಗಳೂರು' ವತಿಯಿಂದ ಮಹತ್ವದ ಕಾರ್ಯಕ್ರಮ ನಡೆಯಿತು.