
ಮಂಗಳೂರು : ನಗರದೆಲ್ಲೆಡೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ, ಪದವಿನಂಗಡಿ ಸಮೀಪದ ಕೆನರಾ ವಿಕಾಸ್ ಪಿಯು ಕಾಲೇಜಿನ ಹಿಂಭಾಗದಲ್ಲಿ ಗುರುವಾರ (ಜುಲೈ 17) ಧರೆ ಕುಸಿದು ದೊಡ್ಡ ಅನಾಹುತ ಸಂಭವಿಸಿದೆ. ಈ ಘಟನೆಯಲ್ಲಿ ಕಾಲೇಜು ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು 15 ದ್ವಿಚಕ್ರ ವಾಹನಗಳು ಮತ್ತು ಒಂದು ಕಾರು ಸಂಪೂರ್ಣವಾಗಿ ಜಖಂಗೊಂಡಿವೆ.
ಭಾರಿ ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕುಸಿದ ಧರೆಯ ಅಡಿ ಸಿಲುಕಿ ವಾಹನಗಳು ನುಜ್ಜುಗುಜ್ಜಾಗಿವೆ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಪರಿಸ್ಥಿತಿಯನ್ನು ಪರಿಶೀಲಿಸಿ, ಮುಂದಿನ ಕ್ರಮಗಳನ್ನು ಕೈಗೊಂಡಿವೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.