spot_img

ಕಲ್ಯಾಣ ಕರ್ನಾಟಕದ ಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ

Date:

spot_img

ಕಲಬುರ್ಗಿ : ರಾಜ್ಯದಲ್ಲಿ ನೇಮಕಾತಿ ಪ್ರಾಧಿಕಾರಗಳು ವಿಭಿನ್ನ ನಿಯಮಗಳ ಮುಖಾಂತರ ನೇಮಕಾತಿ ಮಾಡುತ್ತಿರುವುದರಿಂದ ಕಲ್ಯಾಣ ಕರ್ನಾಟಕದ ಭಾಗದ 371 ಜೇ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿಯಲ್ಲಿ ಭಾರಿ ಪ್ರಮಾಣದಲ್ಲಿ ಅನ್ಯಾಯವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಇಂದು ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಮಾಡಿದರು.

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸಂವಿಧಾನ ವಿಶೇಷ ವಿಧಿ 371 ಜೇ ಬಂದನಂತರ ಈ ಭಾಗದ ನೇಮಕಾತಿ ಹಾಗೂ ಬಡ್ತಿ ವಿಷಯಕ್ಕೆ ಸಂಬಂಧಿಸಿದಂತೆ 2016 ರಿಂದ 2025 ರ ವರೆಗೆ ಅನೇಕ ಸುತ್ತೋಲೆಗಳನ್ನು ಸರ್ಕಾರ ಹೊರಡಿಸಿದೆ. ಈ ಎಲ್ಲಾ ಸುತ್ತೋಲೆಗಳಿಂದ ಗೊಂದಲವುಂಟಾಗಿ ಬೇರೆ ಬೇರೆ ನೇಮಕಾತಿ ಪ್ರಾಧಿಕಾರಗಳು ವಿಭಿನ್ನ ರೀತಿಯಲ್ಲಿ ನೇಮಕಾತಿ ಮಾಡಿಕೊಂಡಿದ್ದರಿಂದ ನಮ್ಮ ಭಾಗದ ಯುವಕರಿಗೆ ಭಾರಿ ಅನ್ಯಾಯವಾಗುತ್ತಿದೆ ಆದ್ದರಿಂದ ಈ ಅನ್ಯಾಯವನ್ನು ತಡೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಇತ್ತೀಚೆಗೆ 03-06-2025 ರಂದು ಮತ್ತೊಂದು ಆದೇಶ ಹೊರಡಿಸಿದ್ದು ಈ ಆದೇಶವು ಸಹ ಬಹಳಷ್ಟು ಗೊಂದಲ ಹೊಂದಿದೆ . ಸ್ಥಳೀಯ ವೃಂದ ಹಾಗೂ ಮೂಲ ವೃಂದ ಮಾಡಿ ಅದರಲ್ಲಿ ಕಂಪಾರ್ಟಮೆಂಟ್ ಮಾಡಿದ್ದು ಅವೈಜ್ಞಾನಿಕವಾಗಿದ್ದು ಇದನ್ನು ಸರಿಪಡಿಸಬೇಕು. ಎಸ್ಸಿ ಎಸ್ಟಿ ಮೀಸಲಾತಿಯನ್ನು ಹೇಗೆ ಪರಿಗಣಿಸುತ್ತೇವೆಯೋ ಅದೇ ರೀತಿ ಕಲ್ಯಾಣ ಕರ್ನಾಟಕ ಮೀಸಲಾತಿಯನ್ನು ನೇಮಕಾತಿ ಹಾಗೂ ಬಡ್ತಿ ಯಲ್ಲಿ ಪರಿಗಣಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಉತ್ತರ ನೀಡಿದ ಮಾನ್ಯ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಭಾಗದ ಸಚಿವರಾದ ಮಾನ್ಯ ಪ್ರಿಯಾಂಕಾ ಖರ್ಗೆ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಮೀಸಲಾತಿ ಕುರಿತು ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದ್ದು ಅವರು ಅದೇ ಭಾಗದವರಾಗಿರುವರಿಂದ ಅವರು ಸರಿ ಮಾಡುವ ವಿಶ್ವಾಸವಿದೆ. ಅವರು ಈಗ ವಿದೇಶದಲ್ಲಿದ್ದು ಅವರು ಬಂದ ನಂತರ ಆ ಆದೇಶದ ಬಗ್ಗೆ ಗೊಂದಲವಿದ್ದರೆ ಅದನ್ನು ಸರಿಪಡಿಸುವ ಕೆಲಸ ಖಂಡಿತ ಮಾಡುತ್ತೇನೆ ಎಂದು ಹೇಳಿದರು. ಅಷ್ಟೇ ಅಲ್ಲದೆ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಕಾನೂನು ನೀಡಿದ್ದು , ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕದ ನೇಮಕಾತಿ ಹಾಗೂ ಬಡ್ತಿ ಎಂದು ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದರು. ನಮೋಶಿಯವರ ಸಲಹೆಯನ್ನು ನಾನು ಪರಿಗಣಿಸುತ್ತೇವೆ ಎಂದು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಿ.ಎಲ್.ಸಂತೋಷ್ ವಿರುದ್ಧದ ಹೇಳಿಕೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ದಿನ ವಿಶೇಷ – ವಿಶ್ವ ಸಸ್ಯ ಹಾಲು ದಿನ

ಮಾನವನ ಆಹಾರ ಪದ್ಧತಿಯಲ್ಲಿ ಇತ್ತೀಚೆಗೆ ಸಸ್ಯ ಆಧಾರಿತ ಆಹಾರಗಳು ಮಹತ್ವ ಪಡೆಯುತ್ತಿವೆ

ಪರಶುರಾಮ ಪ್ರತಿಮೆ ಮರುಸ್ಥಾಪನೆ ಪಿಐಎಲ್‌: ಅರ್ಜಿದಾರ 5 ಲಕ್ಷ ರೂ. ಠೇವಣಿ ಇಡಲು ಹೈಕೋರ್ಟ್ ಸೂಚನೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರದ ನಿರ್ದೇಶನ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ₹5 ಲಕ್ಷ ಠೇವಣಿ ಇರಿಸುವಂತೆ ಸೂಚಿಸಿದೆ.

‘ಸು ಫ್ರಮ್‌ ಸೋ’ ಅಲ್ಲ, ಇದು ‘ಬಿ ಫ್ರಮ್‌ ಸಿ’: ಸರ್ಕಾರದ ವಿರುದ್ಧ ಶಾಸಕ ಸುನಿಲ್‌ ಕುಮಾರ್‌ ವಾಗ್ದಾಳಿ

ಕಾರ್ಕಳ ಶಾಸಕ ಮತ್ತು ಮಾಜಿ ಸಚಿವ ವಿ. ಸುನಿಲ್‌ ಕುಮಾರ್‌ ಅವರು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.