spot_img

ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ

Date:

spot_img
spot_img

ಉಡುಪಿ :’ಸರ್ಕಾರಿ ಶಾಲೆ ಉಳಿಯಲಿ ಬೆಳೆಯಲಿ ಗುಣಮಟ್ಟದ ಶಿಕ್ಷಣ ಸಿಗುವಂತಾಗಲಿ’ ಎಂಬ ಧ್ಯೇಯದೊಂದಿಗೆ ಕರ್ನಾಟಕ ರಾಜ್ಯಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (ರಿ ) ಜಿಲ್ಲಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಮತ್ತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಸಹಯೋಗದೊಂದಿಗೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನಾ ಕಾರ್ಯಕ್ರಮ, ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲೆ ಪ್ರಶಸ್ತಿ ಪ್ರಧಾನ ಸಮಾರಂಭವು ಶ್ರೀಕೃಷ್ಣ ಮಠ ರಾಜಾಂಗಣ ಸಭಾಭವನದಲ್ಲಿ ಜರುಗಿತು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳ ಶುಭಾಶೀರ್ವಾದದೊಂದಿಗೆ ಉದ್ಘಾಟನೆಗೊಂಡಿತು.

ಈ ಕಾರ್ಯಕ್ರಮದಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ, ಶಾಲಾ ದಾಖಲಾತಿ ಸ್ವಚ್ಛ ಸುಂದರ ವಾತಾವರಣ ನಿರ್ಮಾಣ, ಮೂಲಭೂತ ಸೌಕರ್ಯ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ಈ ಎಲ್ಲಾ ದೃಷ್ಟಿಕೋನವನ್ನು ಆಧರಿಸಿ ಸುಂದರ ಪುರಾಣಿಕ ಸಂಯುಕ್ತ ಸರಕಾರಿ ಪ್ರೌಢಶಾಲೆ ಪೆರ್ವಾಜೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್ ಡಿ ಎಂ ಸಿ ಮತ್ತು ಶಾಲೆ ಪ್ರಶಸ್ತಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಎಸ್ ಗಂಗಣ್ಣನವರು ಪ್ರಧಾನ ಮಾಡಿದರು. ಸಭಾ ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಮನು ಪಟೇಲ್. ಬಿ. ವೈ, ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಜಿಲ್ಲಾಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು, ಡಯಟ್ ಪ್ರಾಂಶುಪಾಲರಾದ ಡಾ.ಅಶೋಕ್ ಕಾಮತ್, ಜಿಲ್ಲಾ ಘಟಕದ ಉಪಾಧ್ಯಕ್ಷರು ಹಾಗೂ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ಉಷಾ ರಮೇಶ್, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಆನಂದ್ ರಾಯ ನಾಯಕ್, ಸಮನ್ವಯ ವೇದಿಕೆಯ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ವೀಣಾ ರಾಜೇಶ್ ಭಂಡಾರಿ, ಸಮನ್ವಯ ವೇದಿಕೆಯ ಕಾರ್ಯದರ್ಶಿ ವನಿತ. ವಿ ಆಚಾರ್, ಜೊತೆ ಕಾರ್ಯದರ್ಶಿ ಸದಾನಂದ ಸಾಲಿಯಾನ್, ಶಾಲಾ ಮುಖ್ಯೋಪಾಧ್ಯಾಯರಾದ ದಿವಾಕರ್, ವಿದ್ಯಾರ್ಥಿ ನಾಯಕ ಕವೀಶ್, ಸದಸ್ಯರಾದ ಅಶ್ವಿನಿ ಶೆಟ್ಟಿ, ಕೃಷ್ಣಮಡಿವಾಳ, ರಾಘವೇಂದ್ರ ಆಚಾರ್, ಅಶೋಕ್ ಮಡಿವಾಳ, ಹರೀಶ್ ಉಪಸಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದೀಪಾವಳಿ ಪ್ರಯುಕ್ತ: ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದಿಂದ ಕೊಂಡಾಡಿ ಭಜನೆಕಟ್ಟೆಯಲ್ಲಿ ಗೂಡುದೀಪ ಸ್ಪರ್ಧೆ

ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ, ಹಿರಿಯಡಕ ಇವರ ವತಿಯಿಂದ ಗೂಡುದೀಪ ಸ್ಪರ್ಧೆಯು ನಡೆಯಲಿದೆ.

ನೋಡೋಕಷ್ಟೆ ಮುಳ್ಳು; ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಪಾಪಸ್​ ಕಳ್ಳಿ!

ಪಾಪಸ್ ಕಳ್ಳಿ (Cereus Night Bloom Cactus) ನೋಡುವುದಕ್ಕೆ ಮುಳ್ಳುಗಳಿಂದ ಕೂಡಿದ್ದರೂ, ಇದು ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ.

ಬೆಂಗಳೂರಿನ ಶ್ರೀರಾಂಪುರದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಬರ್ಬರ ಹತ್ಯೆ

ರಾಜಧಾನಿಯ ಶ್ರೀರಾಂಪುರ ಪ್ರದೇಶದಲ್ಲಿ ಹಾಡಹಗಲೇ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಜಾತಿ ಗಣತಿ ಸಮೀಕ್ಷೆಗೆ ತೆರಳಿದ್ದ ಕೋಲಾರದ ಶಿಕ್ಷಕಿ ಐಪಲ್ಲಿ ಕೆರೆಯಲ್ಲಿ ಶವವಾಗಿ ಪತ್ತೆ!

ಜಾತಿ ಗಣತಿ ಸಮೀಕ್ಷೆಗೆ ತೆರಳಿದ ಶಿಕ್ಷಕಿಯೊಬ್ಬರು ನಾಪತ್ತೆಯಾಗಿದ್ದು, ಇದೀಗ ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.