
ಸಾಣೂರು : ಇಂದು ಮುರತಂಗಡಿ ಸಮೀಪ ವಿದ್ಯುತ್ ಸಮಸ್ಯೆಯನ್ನು ಸರಿಪಡಿಸಲು ಹೋದ ಲೈನ್ ಮೆನ್ಗೆ ವಿದ್ಯುತ್ ಶಾಕ್ ತಗುಲಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಮೂಲಗಳ ಪ್ರಕಾರ, ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಕೆಲಸ ಮಾಡುವ ಮೊದಲು, ಲೈನ್ ಮೆನ್ ಸಂಬಂಧಪಟ್ಟ ಅಧಿಕಾರಿಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಸೂಚಿಸಿದ್ದರು. ಆದರೆ, ತಾಂತ್ರಿಕ ದೋಷದಿಂದಾಗಿ ವಿದ್ಯುತ್ ಪ್ರವಾಹ ಮುಂದುವರಿದಿದ್ದು, ಲೈನ್ ಮೆನ್ ಕಂಬದಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಈ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.