
ಹಿರಿಯಡ್ಕ : ಲಯನ್ಸ್ ಕ್ಲಬ್ ಹಿರಿಯಡ್ಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನುಆಚರಿಸಲಾಯಿತು. ಮುಖ್ಯ ಶಿಕ್ಷಕಿಯಾದ ಸರಸ್ವತಿ, ಸಹ ಶಿಕ್ಷಕಿಯರಾದ ಜ್ಯೋತಿ, ಶಬನಾ ಪರ್ವೀನ್, ಸುಹಾಸಿನಿ, ವಿಮಲಾ, ಶಾರದಾರವರನ್ನು ಶಾಲು ಹೊದಿಸಿ ಹಾರ, ಪುಷ್ಪ ಮತ್ತು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಹಿರಿಯಡ್ಕದ ಅಧ್ಯಕ್ಷರಾದ ರಘುವೀರ್ ಶೆಟ್ಟಿಗಾರ್ ರವರು ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸುತ್ತಾ ಲಯನ್ಸ್ ಕ್ಲಬ್ ಹಿರಿಯಡ್ಕದ ಕಾರ್ಯ ಚಟುವಟಿಕೆಗಳ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಹಿರಿಯಡ್ಕದ ಸದಸ್ಯರಾದ ಹರೀಶ್ ಹೆಗ್ಡೆ, ರವೀಂದ್ರನಾಥ್ ಹೆಗ್ಡೆ , ಡಾ. ಸತೀಶ್ ಶೆಟ್ಟಿ ಬಾಲಕೃಷ್ಣ ಹೆಗ್ಡೆ ಮತ್ತು ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸತ್ಯಾನಂದ ನಾಯಕ್ ಆತ್ರಾಡಿ ಮುಂತಾದವರು ಉಪಸ್ಥಿತರಿದ್ದರು.