
ಬೈಲೂರು : ಲಯನ್ಸ್ ಕ್ಲಬ್ ನೀರೆ ಬೈಲೂರು ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಲಯನ್ಸ್ ಕ್ಲಬ್ ನೀರೆ ಬೈಲೂರು ವತಿಯಿಂದ ಸ್ಥಳೀಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಈ ಕೆಳಗಿನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.
1ನೇ ತರಗತಿಯಿಂದ 4ನೇ ತರಗತಿಯ ವಿದ್ಯಾರ್ಥಿಗಳಿಗೆ 1) ಚಿತ್ರ ಕಲೆ 2) ರಾಷ್ಟ್ರನಾಯಕರ ವೇಷಭೂಷಣ ಸ್ಪರ್ಧೆ
5ನೇ ತರಗತಿಯಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ 1) ದೇಶ ಭಕ್ತಿ ಗೀತೆ 2) ಭಾಷಣ ಸ್ಪರ್ಧೆ
8ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 1)ಪ್ರಬಂಧ 2) ಭಾಷಣ ಸ್ಪರ್ಧೆ

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ನೀರೆ ಬೈಲೂರು ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಬೈಲೂರು , ಲಯನ್ಸ್ ಕ್ಲಬ್ ಸದಸ್ಯರು , ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.