
ಕಾರ್ಕಳ : ಆಗಸ್ಟ್ 3ರಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಲೂರ್ಡ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕುಬುಡೋ ಬುಡೋಕಾನ್ ಕರಾಟೆ ಡೋ ಅಸೋಸಿಯೇಶನ್ ಕರ್ನಾಟಕವನ್ನು ಪ್ರತಿನಿಧಿಸಿದ್ದ ಶಾಲೆಯ 15 ವಿದ್ಯಾರ್ಥಿಗಳು ಒಟ್ಟು 19 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
5 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕ
ಈ ಚಾಂಪಿಯನ್‌ಶಿಪ್‌ನಲ್ಲಿ ವಿದ್ಯಾರ್ಥಿಗಳು 5 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕಗಳನ್ನು ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳ ಈ ಯಶಸ್ಸಿಗೆ ಶಾಲೆಯ ಸಂಚಾಲಕರಾದ ಹೆರಾಲ್ಡ್ ಪೆರೇರಾ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಾಸ್ಮಿನ್ ಪಿಂಟೋ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ವಿದ್ಯಾರ್ಥಿಗಳು ಕರಾಟೆ ಶಿಕ್ಷಕರಾದ ರೆನ್ಸಿ ಸೋಮನಾಥ್ ಡಿ. ಸುವರ್ಣ ಮತ್ತು ಸೆನ್ಸಾಯ್ ವಿಜಯಲಕ್ಷ್ಮಿ ಆರ್. ನಾಯಕ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.