ಮಧ್ಯಪ್ರದೇಶದಲ್ಲಿ ಮರಣೋತ್ತರ ಪರೀಕ್ಷೆ ವೇಳೆ ಎದ್ದು ಕುಳಿತ ಯುವಕನ ಶವ !

Date:

spot_img

ಮಧ್ಯಪ್ರದೇಶ: ವೈದ್ಯಕೀಯ ಲೋಕವೇ ಬೆಚ್ಚಿಬೀಳುವಂತಹ ಘಟನೆಯೊಂದು ಮಧ್ಯಪ್ರದೇಶದ ಗುನಾ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದ್ದು, ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದ ಯುವಕನೊಬ್ಬ ಮರಣೋತ್ತರ ಪರೀಕ್ಷೆಯ ಮೇಜಿನ ಮೇಲೆಯೇ ಎದ್ದು ಕುಳಿತ ಆಘಾತಕಾರಿ ಪ್ರಸಂಗ ಬೆಳಕಿಗೆ ಬಂದಿದೆ. ವೈದ್ಯರ ಅಚಾತುರ್ಯದಿಂದಾಗಿ ಬದುಕಿದ್ದ ಯುವಕನೇ ಶವಾಗಾರ ಸೇರಿದ್ದ ಈ ಘಟನೆ ಇಡೀ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

ಹುಜ್ಮಿಲ್ ಪ್ರದೇಶದ ನಿವಾಸಿ 20 ವರ್ಷದ ಜಾನ್ ಪಾರ್ಟಿ ಎಂಬ ಯುವಕ ಮಾರ್ಚ್ 11 ರಂದು ಮಾನಸಿಕ ಒತ್ತಡದಿಂದ ವಿಷ ಸೇವಿಸಿದ್ದರು. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಲ್ಲಿನ ವೈದ್ಯರು ಯುವಕನನ್ನು ಪರೀಕ್ಷಿಸುವಲ್ಲಿ ತೋರಿದ ಆತುರ ಅನಾಹುತಕ್ಕೆ ದಾರಿ ಮಾಡಿಕೊಟ್ಟಿತ್ತು. ಯುವಕ ಮೃತಪಟ್ಟಿದ್ದಾನೆ ಎಂದು ದೃಢೀಕರಿಸಿದ ವೈದ್ಯರು, ಯಾವುದೇ ವಿಸ್ತೃತ ತಪಾಸಣೆ ನಡೆಸದೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಆದರೆ ಶವಾಗಾರದಲ್ಲಿ ವೈದ್ಯರು ದೇಹವನ್ನು ಸೀಳಲು ಸಿದ್ಧತೆ ನಡೆಸುತ್ತಿದ್ದಾಗಲೇ ಯುವಕನ ದೇಹದಲ್ಲಿ ಚಲನೆ ಕಂಡುಬಂದಿದೆ. ಕ್ಷಣಾರ್ಧದಲ್ಲಿ ಪ್ರಜ್ಞೆ ಬಂದ ಯುವಕ ತನ್ನ ಸುತ್ತಲಿನ ಸ್ಥಿತಿಯನ್ನು ಕಂಡು ಭಯಭೀತನಾಗಿ ಬೆತ್ತಲೆಯಾಗಿಯೇ ಶವಾಗಾರದಿಂದ ಹೊರಕ್ಕೆ ಓಡಿ ಬಂದಿದ್ದಾನೆ. “ಒಂದು ವೇಳೆ ಪ್ರಜ್ಞೆ ಮರಳದಿದ್ದರೆ ವೈದ್ಯರು ನನ್ನನ್ನು ಜೀವಂತವಾಗಿಯೇ ಸೀಳುತ್ತಿದ್ದರು” ಎಂದು ಯುವಕ ಹೇಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.