
ಉಡುಪಿ : ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಕೆ.ಎ.ಎಸ್ ಅಧಿಕಾರಿ ಮಹಾಂತೇಶ ಹಂಗರಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಜೂನ್ 23ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಮಹಾಂತೇಶ ಹಂಗರಗಿ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಿಂದ ಬಂದವರು. ಕೃಷಿ ವಿಭಾಗದಲ್ಲಿ ಬಿಎಸ್ಸಿ ಪದವೀಧರರಾಗಿರುವ ಅವರು 2017ನೇ ಸಾಲಿನ ಕೆ.ಎ.ಎಸ್ ಬ್ಯಾಚ್ ಅಧಿಕಾರಿಯಾಗಿದ್ದಾರೆ.
ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಮತ್ತು ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಮಹಾಂತೇಶ ಈಗ ಉಡುಪಿ ನಗರಸಭೆಯ ಆಡಳಿತ ಭಾರ ವಹಿಸಿಕೊಂಡಿದ್ದಾರೆ.ನಗರದ ಅಭಿವೃದ್ಧಿ, ಶಿಸ್ತು ಹಾಗೂ ಮೂಲಸೌಕರ್ಯಗಳ ಸುಧಾರಣೆಯ ಕಡೆಗೆ ಅವರು ಪ್ರಾಮಾಣಿಕ ಸೇವೆ ಸಲ್ಲಿಸಲಿದ್ದಾರೆ ಎಂಬ ನಿರೀಕ್ಷೆ ಉಡುಪಿ ನಗರದಲ್ಲಿ ಮೂಡಿದೆ.