
ಉಡುಪಿ : ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ನಿರಾಕರಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಬ್ರಹ್ಮಾವರ ಪೊಲೀಸರು ಇಂದು ತಿಮರೋಡಿ ಅವರನ್ನು ಅವರ ನಿವಾಸದಿಂದ ವಶಕ್ಕೆ ಪಡೆದಿದ್ದರು. ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ನಿರಾಕರಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಹಿರಿಯಡಕದ ಜಿಲ್ಲಾ ಕಾರಾಗ್ರಹಕ್ಕೆ ಹಸ್ತಾಂತರಿಸಲಾಗಿದೆ.