
ಉಡುಪಿ : ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.
ಬೆಳಿಗ್ಗೆ 11 ಗಂಟೆಗೆ ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಿತ್ತು. ಆದರೆ, ವಾದಿಗಳ ಪರದಿಂದ ಹೆಚ್ಚುವರಿ ಸಮಯದ ಅವಶ್ಯಕತೆ ಇದೆ ಎಂದು ಮನವಿ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ನ್ಯಾಯಾಲಯವು ವಿಚಾರಣೆಯನ್ನು ಮಧ್ಯಾಹ್ನದವರೆಗೆ ಮುಂದೂಡಿತು.
ಈ ಪ್ರಕರಣದ ಜಾಮೀನು ವಿಚಾರಣೆ ಬಗ್ಗೆ ರಾಜಕೀಯ ಸೇರಿದಂತೆ ಹಲವು ವಲಯಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ.