
ಕಣಜಾರು : ದಿನಾಂಕ 23/06/2025 ಸೋಮವಾರ ಕಣಜಾರು ಗ್ರಾಮದ ಮಡಿಬೆಟ್ಟು ಶಾಲಾ ಮಕ್ಕಳಿಗೆ ಮೈತ್ರಿ ಸೇವಾ ಸಂಘದ ವತಿಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರು, ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿಗಳು, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರು, ಮೈತ್ರಿ ಸಂಘದ ಅಧ್ಯಕ್ಷರಾದ ಹರಿಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ರಮೇಶ್ ಕಲ್ಲೊಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು, ಶಾಲಾ ಅಭಿಮಾನಿಗಳು, ಶಿಕ್ಷಕರುಗಳು ಸೇರಿದ್ದರು. ಕಾರ್ಯಕ್ರಮದಲ್ಲಿ ವಿಕ್ರಮ್ ಹೆಗ್ಡೆ ಯವರು ಕಾರ್ಯಕ್ರಮದ ಉದ್ದೇಶದ ಬಗ್ಗೆ ಮಾತನಾಡಿದರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಅಶ್ವಥ್ ಬಿ.ಕೆ. ಯವರು ಕಾರ್ಯಕ್ರಮ ನಿರೂಪಣೆ ಮಾಡಿದರು.


