spot_img

ರಾಜ್ಯ ಪೊಲೀಸ್ ಇಲಾಖೆಗೆ ಮಹತ್ವದ ಸರ್ಜರಿ: 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ!

Date:

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಪುನರ್ ರಚನೆ ನಡೆದಿದ್ದು, 35 ಭಾರತೀಯ ಪೊಲೀಸ್ ಸೇವಾ (ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳ ಟೀಕೆಗಳು ಮತ್ತು ಜೈಲುಗಳಲ್ಲಿ ನಡೆಯುತ್ತಿರುವ ಸರಣಿ ಅಕ್ರಮಗಳ ಕುರಿತ ವರದಿಗಳ ಬೆನ್ನಲ್ಲೇ ಈ ದೊಡ್ಡ ಪ್ರಮಾಣದ ವರ್ಗಾವಣೆ ನಡೆದಿದೆ. ಬೆಂಗಳೂರಿನ ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಹಲವು ಮಹತ್ವದ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ.

ಡಿಐಜಿ ಎಂ.ಎನ್. ಅನುಚೇತ್ (ಬೆಂಗಳೂರು ಸಂಚಾರ ಪೊಲೀಸ್ ವಿಭಾಗ), ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಡಿಸಿಪಿ ಜಿತೇಂದ್ರ ಕುಮಾರ್ ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ವರ್ಗಾಯಿಸಿದೆ.

ವರ್ಗಾವಣೆಗೊಂಡ ಪ್ರಮುಖ ಅಧಿಕಾರಿಗಳು ಮತ್ತು ಅವರ ಹೊಸ ಹುದ್ದೆಗಳು ಹೀಗಿವೆ:

  • ಅಕ್ಷಯ್ ಮಚೀಂದ್ರಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗ
  • ಅಜಯ್ ಹಿಲೋರಿ – ಜಂಟಿ ಪೊಲೀಸ್ ಆಯುಕ್ತ, ಅಪರಾಧ ವಿಭಾಗ
  • ಪರಶುರಾಮ್ – ಡಿಸಿಪಿ, ವೈಟ್‌ಫೀಲ್ಡ್ ವಿಭಾಗ
  • ಕಾರ್ತಿಕ್ ರೆಡ್ಡಿ – ಜಂಟಿ ಪೊಲೀಸ್ ಆಯುಕ್ತ, ಸಂಚಾರ ವಿಭಾಗ (ಡಿಐಜಿ ಶ್ರೇಣಿಗೆ ಬಡ್ತಿ)
  • ಅನೂಪ್ ಶೆಟ್ಟಿ – ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ, ಸಂಚಾರ
  • ಶಿವಪ್ರಕಾಶ್ ದೇವರಾಜು – ಲೋಕಾಯುಕ್ತ ಎಸ್ಪಿ, ಬೆಂಗಳೂರು
  • ಜಯಪ್ರಕಾಶ್ – ಬೆಂಗಳೂರು ಉತ್ತರ ಸಂಚಾರ ವಿಭಾಗ, ಡಿಸಿಪಿ
  • ಎಂ.ನಾರಾಯಣ್ – ಎಲೆಕ್ಟ್ರಾನಿಕ್ ಸಿಟಿ ವಿಭಾಗ, ಡಿಸಿಪಿ
  • ಅನಿತಾ.ಬಿ ಹದ್ದಣ್ಣನವರ್ – ಬೆಂಗಳೂರು ಆಗ್ನೇಯ ವಿಭಾಗ ಡಿಸಿಪಿ
  • ಸೈದಲು ಅಡಾವತ್ – ಸಿಐಡಿ, ಎಸ್ಪಿ
  • ಬಾಬಾ ಸಾಬ್ ನ್ಯಾಮಗೌಡ – ಬೆಂಗಳೂರು ಉತ್ತರ ವಿಭಾಗ, ಡಿಸಿಪಿ
  • ನಾಗೇಶ್ – ಬೆಂಗಳೂರು ವಾಯುವ್ಯ ವಿಭಾಗ, ಡಿಸಿಪಿ
  • ಶ್ರೀಹರಿ ಬಾಬು – ಬೆಂಗಳೂರು ಸಿಸಿಬಿ ಡಿಸಿಪಿ
  • ಸೌಮ್ಯಲತಾ – ಸಿಎಆರ್ ಹೆಡ್ ಕ್ವಾರ್ಟರ್ಸ್, ಡಿಸಿಪಿ
  • ಎಂ.ಎನ್.ಅನುಚೇತ್ – ಡಿಐಜಿ ನೇಮಕಾತಿ ವಿಭಾಗ
  • ವರ್ತಿಕಾ ಕಟೀಯಾರ್ – ಬಳ್ಳಾರಿ ವಲಯ, ಡಿಐಜಿ
  • ಶಾಂತರಾಜು – ಎಸ್ಪಿ, ಗುಪ್ತಚರ ಇಲಾಖೆ
  • ಸಿರಿಗೌರಿ – ಎಸ್ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ
  • ಸುಮನ್.ಡಿ ಪೆನ್ನೆಕರ್ – ಡಿಸಿಪಿ, ಇಂಟಲಿಜೆನ್ಸ್
  • ಸಿಮಿ ಮರೀಯ ಜಾರ್ಜ್‌ – ಡಿಸಿಪಿ, ದಕ್ಷಿಣ ವಿಭಾಗ ಸಂಚಾರ
  • ವೈ.ಅಮರನಾಥ್ – ಕಮಾಂಡೆಂಟ್ ಫಸ್ಟ್ ಬೆಟಾಲಿಯನ್ ಕೆಎಸ್ಆರ್‌ಪಿ
  • ಯಶೋಧ ವಟ್ಟಗೋಡಿ – ಎಸ್ಪಿ, ಹಾವೇರಿ
  • ಗುಂಜನ್ ಅರ್ಯಾ – ಎಸ್ಪಿ, ಧಾರವಾಡ
  • ಎಂ.ಗೋಪಾಲ್ – ಜಂಟಿ ನಿರ್ದೇಶಕ, ಎಫ್‌ಎಸ್‌ಎಲ್ ಬೆಂಗಳೂರು
  • ಸಿದ್ಧಾರ್ಥ ಗೋಯಲ್ – ಎಸ್ಪಿ, ಬಾಗಲಕೋಟೆ
  • ರೋಹನ್ ಜಗದೀಶ್ – ಎಸ್ಪಿ, ಗದಗ
  • ಶಿವಾಂಶು ರಜಪೂತ – ಎಸ್ಪಿ, ಕೆಜಿಎಫ್
  • ಜಿತೇಂದ್ರ ಕುಮಾರ್ – ಡಿಸಿಪಿ ಕಾನೂನು ಸುವ್ಯವಸ್ಥೆ, ಮಂಗಳೂರು ನಗರ
  • ಎಂ.ಎನ್.ದೀಪನ್ – ಎಸ್ಪಿ, ಉತ್ತರ ಕನ್ನಡ
  • ಎಸ್.ಜಾನವಿ – ಎಸ್ಪಿ, ವಿಜಯನಗರ
  • ಚಂದ್ರಗುಪ್ತ – ಐಜಿಪಿ, ಈಶಾನ್ಯ ಕಲಬುರಗಿ
  • ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ – ಡಿಐಜಿ, ಬೆಂಗಳೂರು ಪೊಲೀಸ್ ಹೆಡ್‌ಕ್ವಾರ್ಟರ್ಸ್

ಈ ವರ್ಗಾವಣೆಗಳು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ಮತ್ತು ಆಡಳಿತದಲ್ಲಿ ಪಾರದರ್ಶಕತೆಯನ್ನು ತರಲು ಸಹಕಾರಿಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಿರ್ವದ ಪಾಪನಾಶಿನಿ ನದಿಯಲ್ಲಿ ಅಕ್ರಮ ಮರಳು ದಂಧೆಗೆ ಬ್ರೇಕ್: ಹಿಟಾಚಿ, ಟಿಪ್ಪರ್ ವಶಕ್ಕೆ

ಪಾಪನಾಶಿನಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಶಿರ್ವ ಪೊಲೀಸರು ದಾಳಿ ನಡೆಸಿ, ಹಿಟಾಚಿ ಯಂತ್ರ ಮತ್ತು ಎರಡು ಟಿಪ್ಪರ್ ಮರಳನ್ನು ವಶಪಡಿಸಿಕೊಂಡಿದ್ದಾರೆ.

ತೇಜಸ್ವಿ ಯಾದವ್ ಪತ್ನಿಯನ್ನು ‘ಜೆರ್ಸಿ ಹಸು’ ಎಂದ ಮಾಜಿ ಶಾಸಕ: ಬಿಹಾರದಲ್ಲಿ ರಾಜಕೀಯ ವಿವಾದ

ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ.

ಯುವಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ

ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ, ಆದರೆ ಅದು ದೇಹದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪಿದಾಗ ಕೆಲವು ಚಿಹ್ನೆಗಳು ಕಾಣಿಸಿಕೊಳ್ಳಬಹುದು.

ದಿನ ವಿಶೇಷ – ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ

ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).