ಮಲ್ಪೆ ಬಂದರಿನಲ್ಲಿ ಮೀನು ಏಲಂ ವಿಚಾರಕ್ಕೆ ಮಾರಣಾಂತಿಕ ಹಲ್ಲೆ, ಕೇಸ್ ದಾಖಲು!

Date:

spot_img

ಉಡುಪಿ : ಜಿಲ್ಲೆಯ ಪ್ರಸಿದ್ಧ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಏಲಂ ಪ್ರಕ್ರಿಯೆ ನಡೆಸುವ ವಿಚಾರವಾಗಿ ಭೀಕರ ಸಂಘರ್ಷ ನಡೆದಿದ್ದು, ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗುರುವಾರ ಜರುಗಿದೆ. ಈ ಘಟನೆ ಬಂದರು ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಿಸಿತ್ತು.

ಮಲ್ಪೆ ಬಂದರಿನಲ್ಲಿ ಮೀನು ಏಲಂ ಕೆಲಸ ಮಾಡುತ್ತಿದ್ದ ಅಂಬಲಪಾಡಿ ನಿವಾಸಿ ಶೇಕ್ ಅಯ್ಯುಬ್ (52) ಎಂಬುವವರ ಮೇಲೆ ಈ ಹಲ್ಲೆ ನಡೆದಿದೆ. ಮೂಲಗಳ ಪ್ರಕಾರ, ಗುರುವಾರ ಬೆಳಿಗ್ಗೆ ಬಾಲಕನೊಬ್ಬ ತಂದಿದ್ದ ಮೀನಿನ ಏಲಂ ಪ್ರಕ್ರಿಯೆಯಲ್ಲಿ ಶೇಕ್ ಅಯ್ಯುಬ್ ತೊಡಗಿದ್ದಾಗ, ಅಲ್ಲಿಗೆ ಬಂದ ಮಿಥುನ್ ಕರ್ಕೇರಾ ಎಂಬ ವ್ಯಕ್ತಿ ವಿನಾಕಾರಣ ಜಗಳ ತೆಗೆದಿದ್ದಾನೆ. “ನೀನು ಯಾಕೆ ಮೀನು ತಂದಿ? ಏಲಂ ಮಾಡಲು ನಿನಗೆ ಯಾರು ಅಧಿಕಾರ ನೀಡಿದ್ದು?” ಎಂದು ಪ್ರಶ್ನಿಸಿ ಅಯ್ಯುಬ್ ಅವರ ಮುಖ, ಕಣ್ಣು, ಹೊಟ್ಟೆ ಮತ್ತು ತಲೆಗೆ ಮನಬಂದಂತೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಗಾಯಾಳುವನ್ನು ತಕ್ಷಣವೇ ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಮಿಥುನ್ ಹಲ್ಲೆ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.