
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರಿನಲ್ಲಿ ಆರೋಪಿಯ ಸೆರೆ
ಬಂಧಿತ ಆರೋಪಿಯನ್ನು ಮಂಗಳೂರಿನ ಜಪ್ಪು ಮಾರ್ಕೆಟ್ ನಿವಾಸಿ ಮೊಹಮ್ಮದ್ ಸಮೀರ್ ಎಂದು ಗುರುತಿಸಲಾಗಿದೆ. 2011ರಲ್ಲಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಈತ ತಲೆಮರೆಸಿಕೊಂಡಿದ್ದ.
ಮಲ್ಪೆ ಪೊಲೀಸ್ ಉಪನಿರೀಕ್ಷಕ ಅನಿಲ್‌ಕುಮಾರ್ ಅವರು ಸಿಬ್ಬಂದಿಗಳಾದ ಸುರೇಶ್, ವಿಶ್ವನಾಥ ಮತ್ತು ಕುಬೇರ ಅವರೊಂದಿಗೆ ಕಾರ್ಯಾಚರಣೆ ನಡೆಸಿ, ಮಂಗಳೂರಿನಲ್ಲಿ ಆರೋಪಿಯನ್ನು ಆಗಸ್ಟ್ 17ರಂದು ಬಂಧಿಸಿದ್ದಾರೆ. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.