ಶೃಂಗೇರಿ ಲಾಡ್ಜ್‌‌ನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ಹಿಂದು ಮಹಿಳೆ ಜತೆಗಿದ್ದ ವ್ಯಕ್ತಿ ಬಂಧನ

Date:

spot_img

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ನಲ್ಲಿ ತಂಗಿದ್ದ ಅನ್ಯ ಕೋಮಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ತಯಾರಿಸಿದ್ದು ಬಯಲಾಗಿದೆ.

ಬಂಧಿತ ಆರೋಪಿಯನ್ನು ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರು ಮೂಲದ 42 ವರ್ಷದ ಅಬ್ದುಲ್ ಸಮದ್ ಎಂದು ಗುರುತಿಸಲಾಗಿದೆ. ಈತ ಶೃಂಗೇರಿ ಮೂಲದ 38 ವರ್ಷದ ಹಿಂದೂ ಮಹಿಳೆಯೊಂದಿಗೆ ಲಾಡ್ಜ್‌ಗೆ ಹೋಗಿದ್ದು, ತಾವು ಪತಿ-ಪತ್ನಿ ಎಂದು ಹೇಳಿ ರೂಮ್ ಪಡೆದಿದ್ದನು.

ಆದರೆ, ಲಾಡ್ಜ್ ಸಿಬ್ಬಂದಿಗೆ ಅನುಮಾನ ಬಂದು ಅವರ ಗುರುತಿನ ಚೀಟಿಗಳನ್ನು ಪರಿಶೀಲಿಸಿದಾಗ, ಅಬ್ದುಲ್ ಸಮದ್ ತನ್ನ ಅಸಲಿ ಹೆಸರನ್ನು ಬದಲಿಸಿ ‘ರಮೇಶ್’ ಎಂಬ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದು ಗೊತ್ತಾಗಿದೆ. ತಕ್ಷಣವೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಶೃಂಗೇರಿ ಪೊಲೀಸರು ಅಬ್ದುಲ್ ಸಮದ್ ಮತ್ತು ಆತನ ಜೊತೆಗಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈತ ಬೇರೆ ಕೋಮಿನ ವ್ಯಕ್ತಿಯಾಗಿದ್ದು, ಮಹಿಳೆಯೊಂದಿಗೆ ಸಂಬಂಧ ಬೆಳೆಸಲು ಹಿಂದೂ ಹೆಸರಿನಲ್ಲಿ ಗುರುತಿನ ಚೀಟಿ ನಕಲಿ ಮಾಡಿಸಿಕೊಂಡಿದ್ದು ದೃಢಪಟ್ಟಿದೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ