ಮಂಗಳೂರು ಉದ್ಯಮಿ ನಿತಿನ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Date:

spot_img
nithin

ಮಂಗಳೂರು: ಮಂಗಳೂರು ಮೂಲದ ಹೊಟೇಲ್ ಉದ್ಯಮಿ, ಮರೋಳಿ ನಿವಾಸಿ ನಿತಿನ್ ಪೂಜಾರಿ ಆತ್ಮಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ನಿತಿನ್ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯೇ ಅಲ್ಲ, ಬದಲಾಗಿ ಮಹಿಳೆಯೊಬ್ಬಳ ಸಂಬಂಧದಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಅವರ ಗೆಳೆಯರು ಗಂಭೀರ ಆರೋಪ ಮಾಡಿದ್ದಾರೆ.

ಲಿವಿಂಗ್ ಟುಗೆದರ್, ಆನಂತರ ಸಾವು

ನಿತಿನ್‌ಗೆ ಓರ್ವ ಆಂಟಿ ಜೊತೆ ಸ್ನೇಹವಿತ್ತು. ಈ ಸ್ನೇಹ ನಂತರ ಪ್ರೀತಿಗೆ ತಿರುಗಿ ಮದುವೆಯಾಗುವ ಹಂತಕ್ಕೆ ತಲುಪಿತ್ತು ಎನ್ನಲಾಗಿದೆ. ಮದುವೆಗೂ ಮುನ್ನವೇ ಇವರು ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದರು ಎಂಬ ಚರ್ಚೆ ಆಪ್ತರ ವಲಯದಲ್ಲಿ ತೀವ್ರವಾಗಿ ನಡೆಯುತ್ತಿದೆ.

ನಿತಿನ್ ವಿಷ ಸೇವಿಸಿದ್ದಾರೆ ಎಂದು ಇದೇ ಮಹಿಳೆ ಹೊಟೇಲ್ ಸಿಬ್ಬಂದಿಗೆ ಕರೆ ಮಾಡಿದ್ದರಂತೆ. ನಿತಿನ್‌ರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. “ವಿಷ ಸೇವಿಸಿದರೆ ಎಷ್ಟು ಗಂಭೀರವಾಗಿದ್ದರೂ ಒಂದೆರಡು ದಿನವಾದರೂ ಇರುತ್ತಾರೆ. ಆದರೆ ಇವರು ದಿಢೀರ್ ಸಾವನ್ನಪ್ಪಿದ್ದಾರೆ. ಇವರೇ ವಿಷ ಸೇವಿಸಿದ್ರಾ ಅಥವಾ ಇವರಿಗೆ ವಿಷ ಪ್ರಾಶನ ಮಾಡಲಾಯಿತಾ?” ಎಂಬ ಹಲವು ಅನುಮಾನಗಳು ಇದೀಗ ಹುಟ್ಟಿಕೊಂಡಿವೆ.

ಪೊಲೀಸ್ ಕಮಿಷನರ್ ಸ್ಪಷ್ಟನೆ

ಈ ಸಾವಿನ ಬಗ್ಗೆ ಅನುಮಾನಗಳಿದ್ದರೆ ಠಾಣೆಗೆ ಬಂದು ಮಾಹಿತಿ ನೀಡಿ, ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಆದರೆ, ನಿತಿನ್ ಅವರ ತಾಯಿ ದೂರು ನೀಡುವಾಗಲೂ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಕಮಿಷನರ್ ಹೇಳಿದ್ದಾರೆ. ಒಟ್ಟಿನಲ್ಲಿ, ಈ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.