
ಮಂಗಳೂರು : ಮಂಗಳೂರು ನಗರದಲ್ಲಿ ಡ್ರಗ್ಸ್ ದಂಧೆ ಮಟ್ಟಹಾಕಲು ಕಮಿಷನರ್ ಅನುಪಮ್ ಅಗರವಾಲ್ ಅವರು ನಡೆಸುತ್ತಿರುವ ನಿರಂತರ ಪ್ರಯತ್ನಗಳು ಫಲ ನೀಡಿದ್ದು, ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ 8 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ವಿದ್ಯಾರ್ಥಿಗಳು ಡ್ರಗ್ಸ್ ಜಾಲದಲ್ಲಿ ಸಿಲುಕುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿ ಕಮಿಷನರ್ ವಿಡಿಯೋ ಮೂಲಕ ಖಡಕ್ ವಾರ್ನಿಂಗ್ ನೀಡಿದ್ದರು.
ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಚರಣೆಗಿಳಿದ ಪಾಂಡೇಶ್ವರ ಇನ್ಸ್‌ಪೆಕ್ಟರ್ ಗುರುರಾಜ್ ನೇತೃತ್ವದ ತಂಡ, ಬಂದರು ಧಕ್ಕೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಎಂಟು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದೆ. ಬಂಧಿತರೆಲ್ಲರೂ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.
ಬಂಧಿತ ವಿದ್ಯಾರ್ಥಿಗಳನ್ನು ಕೇರಳ ಮೂಲದ ರಾಹುಲ್, ಸಂಗೀತ್ ಕೃಷ್ಣ, ಸೂರಜ್, ಸಂಜಯ್, ಅಶ್ವಂತ್, ಅಬ್ದುಲ್ ಜಬ್ಬಾರ್, ರಿಚರ್ಡ್ ಮತ್ತು ಅನುರಾಗ್ ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಂಗಳೂರು ನಗರದಲ್ಲಿ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಪೊಲೀಸರು ಬದ್ಧರಾಗಿದ್ದಾರೆ ಎಂಬುದಕ್ಕೆ ಈ ಕಾರ್ಯಾಚರಣೆ ಮತ್ತೊಂದು ನಿದರ್ಶನವಾಗಿದೆ.