ಡ್ರಗ್ಸ್ ವಿರುದ್ಧ ಮಂಗಳೂರು ಕಮಿಷನರ್ ಸಮರ: ಎಂಡಿಎಂಎ ಮಾರುತ್ತಿದ್ದ 8 ವಿದ್ಯಾರ್ಥಿಗಳ ಬಂಧನ!

Date:

spot_img

ಮಂಗಳೂರು : ಮಂಗಳೂರು ನಗರದಲ್ಲಿ ಡ್ರಗ್ಸ್ ದಂಧೆ ಮಟ್ಟಹಾಕಲು ಕಮಿಷನರ್ ಅನುಪಮ್ ಅಗರವಾಲ್ ಅವರು ನಡೆಸುತ್ತಿರುವ ನಿರಂತರ ಪ್ರಯತ್ನಗಳು ಫಲ ನೀಡಿದ್ದು, ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ 8 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ವಿದ್ಯಾರ್ಥಿಗಳು ಡ್ರಗ್ಸ್ ಜಾಲದಲ್ಲಿ ಸಿಲುಕುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿ ಕಮಿಷನರ್ ವಿಡಿಯೋ ಮೂಲಕ ಖಡಕ್ ವಾರ್ನಿಂಗ್ ನೀಡಿದ್ದರು.

ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಚರಣೆಗಿಳಿದ ಪಾಂಡೇಶ್ವರ ಇನ್ಸ್‌ಪೆಕ್ಟರ್ ಗುರುರಾಜ್ ನೇತೃತ್ವದ ತಂಡ, ಬಂದರು ಧಕ್ಕೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಎಂಟು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದೆ. ಬಂಧಿತರೆಲ್ಲರೂ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ.

ಬಂಧಿತ ವಿದ್ಯಾರ್ಥಿಗಳನ್ನು ಕೇರಳ ಮೂಲದ ರಾಹುಲ್, ಸಂಗೀತ್ ಕೃಷ್ಣ, ಸೂರಜ್, ಸಂಜಯ್, ಅಶ್ವಂತ್, ಅಬ್ದುಲ್ ಜಬ್ಬಾರ್, ರಿಚರ್ಡ್ ಮತ್ತು ಅನುರಾಗ್ ಎಂದು ಗುರುತಿಸಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಂಗಳೂರು ನಗರದಲ್ಲಿ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಪೊಲೀಸರು ಬದ್ಧರಾಗಿದ್ದಾರೆ ಎಂಬುದಕ್ಕೆ ಈ ಕಾರ್ಯಾಚರಣೆ ಮತ್ತೊಂದು ನಿದರ್ಶನವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಲಾ-ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಯು.ಟಿ. ಖಾದರ್ ಎಚ್ಚರಿಕೆ

ರಾಜ್ಯದ ಎಲ್ಲಾ ಶಾಲೆ ಮತ್ತು ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲು ಸರ್ಕಾರ ತೀರ್ಮಾನಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಗುಳಗಳು ಅಶ್ಲೀಲತೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ಬೈಗುಳಗಳು ಕಾನೂನಿನ ಪ್ರಕಾರ ಅಶ್ಲೀಲತೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೂಡಬಿದಿರೆಯಲ್ಲಿ ವಿವಾಹಿತೆ ಆತ್ಮಹತ್ಯೆ | ಕಾರಣದ ಪತ್ತೆಗೆ ಪೊಲೀಸ್ ತನಿಖೆ

ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಕಾಂಗ್ರೆಸ್ ನಾಟಕಕ್ಕೆ ಬಿಜೆಪಿ ತಿರುಗೇಟು

ಕಾರ್ಕಳದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರ ತೀಕ್ಷ್ಣ ರಾಜಕೀಯ ತಿರುಗೇಟಿನ ಪೂರ್ಣ ಮಾಹಿತಿ ಇಲ್ಲಿದೆ ಓದಿ.