ಗುರುಪುರ ಸೇತುವೆ ಮೇಲಿಂದ ನದಿಗೆ ಜಿಗಿದು ಮೂಡಬಿದಿರೆಯ ಯುವತಿ ಆತ್ಮಹತ್ಯೆ; ಪ್ರಿಯತಮನ ವಂಚನೆಯೇ ಸಾವಿಗೆ ಕಾರಣ?

Date:

spot_img

ಸೋಮವಾರದಂದು ನವ್ಯಾ ತನ್ನ ಸ್ನೇಹಿತೆಯೊಂದಿಗೆ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದಾಗ, ಗುರುಪುರ ಸೇತುವೆಯ ಮೇಲೆ ವಾಹನವನ್ನು ನಿಲ್ಲಿಸುವಂತೆ ಹೇಳಿದ್ದಾಳೆ. ಗಾಡಿ ನಿಲ್ಲುತ್ತಿದ್ದಂತೆಯೇ ಯಾವುದೇ ಮುನ್ಸೂಚನೆ ನೀಡದೆ ಕ್ಷಣಾರ್ಧದಲ್ಲಿ ನದಿಗೆ ಜಿಗಿದಿದ್ದಾಳೆ. ಈ ವೇಳೆ ಜೊತೆಯಲ್ಲಿದ್ದ ಸ್ನೇಹಿತೆ ಆಕೆಯನ್ನು ತಡೆಯಲು ಪ್ರಯತ್ನಿಸಿ ಕೈ ಹಿಡಿದು ಎಳೆದರೂ ಪ್ರಯೋಜನವಾಗಲಿಲ್ಲ. ನವ್ಯಾ ನದಿಯ ನೀರಿನಲ್ಲಿ ಮುಳುಗಿ ಹೋಗಿದ್ದಾಳೆ. ತಕ್ಷಣವೇ ಸ್ಥಳೀಯರು ಬಜ್ಪೆ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡವು ಕಾರ್ಯಾಚರಣೆ ನಡೆಸಿ ಯುವತಿಯ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.

ಪ್ರೇಮ ವಂಚನೆಯ ಶಂಕೆ: ಪ್ರಾಥಮಿಕ ಮಾಹಿತಿಯ ಪ್ರಕಾರ, ಪರಿಶಿಷ್ಟ ಸಮುದಾಯಕ್ಕೆ ಸೇರಿದ ಈ ಯುವತಿ ಕಳೆದ ಕೆಲವು ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಆದರೆ, ಆತ ಮದುವೆಯಾಗುವುದಾಗಿ ನಂಬಿಸಿ ಈಗ ವಂಚಿಸಿರುವುದು ಆತ್ಮಹತ್ಯೆಗೆ ಪ್ರಚೋದನೆ ನೀಡಿರಬಹುದು ಎಂದು ಶಂಕಿಸಲಾಗಿದೆ. ನವ್ಯಾ ಸಾವಿಗೂ ಮುನ್ನ ತನ್ನ ಪ್ರಿಯತಮನನ್ನು ಭೇಟಿಯಾಗಲು ಯತ್ನಿಸಿ ಆತನಿಗೆ ಕರೆ ಮಾಡಿದ್ದಳು ಮತ್ತು ಡೆತ್ ನೋಟ್ ಕೂಡ ಬರೆದಿಟ್ಟಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ