ಮಂಗಳೂರಿನ ಅಪಾರ್ಟ್‌ಮೆಂಟ್ ಕಳ್ಳತನ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ, 20 ಲಕ್ಷ ರೂ. ಮೌಲ್ಯದ ವಸ್ತು ವಶ!

Date:

spot_img

ಮಂಗಳೂರು: ಮಂಗಳೂರು ನಗರದ ಹೃದಯ ಭಾಗವಾದ ಲಾಲ್ ಬಾಗ್ ಪ್ರದೇಶದಲ್ಲಿನ ಅಪಾರ್ಟ್‌ಮೆಂಟ್ ಒಂದಕ್ಕೆ ನುಗ್ಗಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಹಾಗೂ ವಿದೇಶಿ ಕರೆನ್ಸಿ ಸೇರಿ ಹಲವು ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರು ಅಂತರರಾಜ್ಯ ಕಳ್ಳರನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಅಸ್ಸಾಂ ರಾಜ್ಯದ ಕಾಚಾರ್ ಜಿಲ್ಲೆಗೆ ಸೇರಿದ ಅಭಿಜಿತ್ ದಾಸ್ (24) ಮತ್ತು ದೇಬಾ ದಾಸ್ (21) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಪೈಕಿ ಪ್ರಮುಖ ಆರೋಪಿ ಅಭಿಜಿತ್ ದಾಸ್ ಮೇಲೆ ಈ ಹಿಂದೆ ಬೆಂಗಳೂರು ಹಾಗೂ ಅಸ್ಸಾಂನಲ್ಲಿ ಸಹ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಅಕ್ಟೋಬರ್ 19 ಮತ್ತು 20ರ ರಾತ್ರಿ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲ್ ಗ್ರಾಮದ ಲಾಲ್ ಬಾಗ್ ಹ್ಯಾಟ್ ಹಿಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಮೂರು ಫ್ಲಾಟ್‌ಗಳಿಗೆ ನುಗ್ಗಿದ ಕಳ್ಳರು ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, 5000/- ರೂಪಾಯಿ ನಗದು, 3000 ದಿರ್‌ಹಂ (ಸುಮಾರು 70,000/- ರೂಪಾಯಿ ಮೌಲ್ಯ) ಹಾಗೂ ಮೊಬೈಲ್ ಫೋನ್‌ಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ರಿಯಾಜ್ ರಶೀದ್ ಎಂಬುವವರು ಅಕ್ಟೋಬರ್ 20ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ಹಿರಿಯ ಪೊಲೀಸ್ ಅಧಿಕಾರಿಗಳು, ಉರ್ವಾ ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರು, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರ ತಂಡದೊಂದಿಗೆ ಸ್ಥಳ ಪರಿಶೀಲನೆ ನಡೆಸಿ ತನಿಖೆ ಆರಂಭಿಸಿತು. ಪ್ರಕರಣ ದಾಖಲಾದ ಕೇವಲ 20 ಗಂಟೆಗಳ ಒಳಗಾಗಿಯೇ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಅಕ್ಟೋಬರ್ 21ರ ಬೆಳಗಿನ ಜಾವ ಬೆಂಗಳೂರು ನಗರ ಪೊಲೀಸರ ಸಹಕಾರದೊಂದಿಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಎಲ್ಲಾ ಚಿನ್ನಾಭರಣಗಳು, 5000/- ರೂಪಾಯಿ ನಗದು, 3000 ದಿರ್‌ಹಂ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗುವುದು ಮತ್ತು ಇತರೆ ಕಳ್ಳತನ ಪ್ರಕರಣಗಳಲ್ಲಿ ಇವರ ಪಾತ್ರದ ಕುರಿತು ತನಿಖೆ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಡಿಸಿಪಿ ಕ್ರೈಂ ಅವರ ಮಾರ್ಗದರ್ಶನದಲ್ಲಿ ಕೇಂದ್ರ ಉಪ ವಿಭಾಗದ ಎಸಿಪಿ, ಉರ್ವಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಯ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ನಿರ್ವಹಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ