spot_img

ಮಂಗಳೂರಲ್ಲಿ ಹೆಬ್ಬಾವು ಮಾರಾಟ ಜಾಲ ಭೇದಿಸಿದ ಅರಣ್ಯ ಇಲಾಖೆ: 4 ಆರೋಪಿಗಳ ಬಂಧನ

Date:

ಮಂಗಳೂರು: ಖಚಿತ ಮಾಹಿತಿ ಆಧರಿಸಿ ಮಂಗಳೂರಿನಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹೆಬ್ಬಾವು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು 18 ವರ್ಷದ ವಿಹಾಲ್ ಶೆಟ್ಟಿ, 35 ವರ್ಷದ ಇಬ್ರಾಹಿಂ ಶಕೀಲ್ ಇಸ್ಮಾಯಿಲ್, 22 ವರ್ಷದ ಮಹಮ್ಮದ್ ಮುಸ್ತಫಾ ಮತ್ತು 16 ವರ್ಷದ ಪಿಯುಸಿ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿ ಸಾಕುಪ್ರಾಣಿ ಮಾರಾಟ ಮಳಿಗೆ ಹೊಂದಿರುವ ಇಬ್ರಾಹಿಂ ಶಕೀಲ್ ಇಸ್ಮಾಯಿಲ್, ಅಕ್ರಮವಾಗಿ ಹಾವುಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಅರಣ್ಯ ಇಲಾಖೆಗೆ ಲಭಿಸಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು, ಯೋಜಿತ ಕಾರ್ಯಾಚರಣೆ ನಡೆಸಿ, ವಿಹಾಲ್ ಶೆಟ್ಟಿಯನ್ನು ಗ್ರಾಹಕರ ಸೋಗಿನಲ್ಲಿ ಸಂಪರ್ಕಿಸಿದರು. ಯಾವುದೇ ಅನುಮಾನವಿಲ್ಲದೆ, ವಿಹಾಲ್ ಶೆಟ್ಟಿ ಅಧಿಕಾರಿಗಳನ್ನು ನಿಜವಾದ ಗ್ರಾಹಕರು ಎಂದು ನಂಬಿ ಹೆಬ್ಬಾವನ್ನು ಮಾರಾಟ ಮಾಡಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಆತನನ್ನು ವಶಕ್ಕೆ ಪಡೆದರು. ಆತನ ವಿಚಾರಣೆಯ ಆಧಾರದ ಮೇಲೆ ಇತರ ಮೂವರು ಆರೋಪಿಗಳನ್ನು ಸಹ ಬಂಧಿಸಲಾಯಿತು.

ಬಂಧಿತ ಆರೋಪಿಗಳು, ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅನುಸೂಚಿತ (Schedule 1) ಭಾಗ ‘ಸಿ’ ಅಡಿಯಲ್ಲಿ ಸಂರಕ್ಷಿತ ಪ್ರಾಣಿಯಾದ ಇಂಡಿಯನ್ ರಾಕ್ ಪೈಥಾನ್ (ಹೆಬ್ಬಾವು) ಅನ್ನು, ಇದು ಬರ್ಮಿಸ್ ಬಾಲ್ ಪೈಥಾನ್ ಎಂದು ಸುಳ್ಳು ಹೇಳಿ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ಅರಣ್ಯ ಇಲಾಖೆ ತಿಳಿಸಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯು ವನ್ಯಜೀವಿಗಳ ಅಕ್ರಮ ಸಾಗಾಣಿಕೆ ವಿರುದ್ಧ ಅರಣ್ಯ ಇಲಾಖೆಯ ಬದ್ಧತೆಯನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.