
ಮಂಗಳೂರು: ಔಷಧಿಯೆಂದು ತಪ್ಪಾಗಿ ಭಾವಿಸಿ ಇಲಿಪಾಷಾಣ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್ ಬಾಕ್ರಬೈಲ್ ಮಂಜುನಾಥ್ ಹೆಗ್ಡೆ ಎಂದು ಗುರುತಿಸಲಾಗಿದೆ. ಅವರು ಹೆಂಡತಿ ಮತ್ತು ಮಕ್ಕಳನ್ನು ಅಗಲಿದ್ದಾರೆ. ಈ ಅನಿರೀಕ್ಷಿತ ಘಟನೆ ಪೊಲೀಸ್ ಇಲಾಖೆಯಲ್ಲಿ ಮತ್ತು ಅವರ ಕುಟುಂಬದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.