ಕೊಲೆಗಳಿಗೆ ಬಿಜೆಪಿ-ಸಂಘ ಪರಿವಾರದವರೇ ಕಾರಣ! – ದಿನೇಶ್ ಗುಂಡೂರಾವ್

Date:

spot_img

ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರಿನಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳಿಗೆ ಬಿಜೆಪಿ ಮತ್ತು ಸಂಘ ಪರಿವಾರದವರೇ ಕಾರಣ ಎಂದು ತೀವ್ರ ಟೀಕೆ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು, “ಮಂಗಳೂರಿನಲ್ಲಿ ಕೊಲೆಗಳು ಕೋಮು ವೈಷಮ್ಯ ಮತ್ತು ಸೇಡಿನಿಂದ ನಡೆಯುತ್ತಿವೆ. ಇದು ಸಮಾಜಕ್ಕೆ ಹಾನಿಕಾರಕವಾಗಿದ್ದು, ರಾಜ್ಯದ ಮುಖಕ್ಕೆ ಕಳಂಕ ತರುವ ಸಂಗತಿಯಾಗಿದೆ” ಎಂದು ಹೇಳಿದರು.

“ಹೆಣದ ಮೇಲೆ ರಾಜಕೀಯ ಮಾಡುವ ಬಿಜೆಪಿ”

ಬಂಟ್ವಾಳದ ಯುವಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ಗುಂಡೂರಾವ್, “ಈ ಹತ್ಯೆಗೆ ಹಿಂದೆ ಯಾರಿದ್ದಾರೆಂಬುದು ಪೊಲೀಸರಿಗೆ ತಿಳಿದಿದೆ. ಬಿಜೆಪಿ ಮತ್ತು ಸಂಘ ಪರಿವಾರದವರು ಯಾವಾಗಲೂ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿ, ಹೆಣದ ಮೇಲೆ ರಾಜಕೀಯ ಮಾಡುತ್ತಾರೆ. ಅವರ ಬಾಯಿಗೆ ಲಗಾಮೇ ಇಲ್ಲ” ಎಂದು ಟೀಕ್ಷೆ ಮಾಡಿದರು.

ಮುಂದುವರೆದು, “ಬಿಜೆಪಿ ಮತ್ತು ಅದರ ಸಂಘಟನೆಗಳು ಸಾಮಾಜಿಕ ಶಾಂತಿಗೆ ಧಕ್ಕೆ ತರುವ ಕಾರ್ಯಗಳಲ್ಲಿ ನಿರತವಾಗಿವೆ. ಮಂಗಳೂರಿನಲ್ಲಿ ನಡೆಯುತ್ತಿರುವ ಅಶಾಂತಿ ಮತ್ತು ಹಿಂಸಾಚಾರಗಳ ಹಿಂದೆ ಅವರದೇ ಪಾತ್ರವಿದೆ” ಎಂದು ಆರೋಪಿಸಿದರು.

ಪ್ರತಿಕ್ರಿಯೆಗಳು

ಬಿಜೆಪಿ ನಾಯಕರು ಗುಂಡೂರಾವ್ ಅವರ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. “ಕಾಂಗ್ರೆಸ್ ನಾಯಕರು ಸಮಸ್ಯೆಗಳಿಗೆ ರಾಜಕೀಯ ಬಣ್ಣ ತಂದು, ತಮ್ಮ ವಿಫಲತೆಯನ್ನು ಮರೆಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಮಂಗಳೂರಿನ ಸುರಕ್ಷತೆ ಮತ್ತು ಶಾಂತಿ ಪುನರ್ಸ್ಥಾಪನೆಗೆ ಸರ್ಕಾರವು ಹೇಗೆ ಕ್ರಮ ತೆಗೆದುಕೊಳ್ಳುತ್ತದೆ ಎಂಬುದು ಎಲ್ಲರ ಗಮನದ ಕೇಂದ್ರವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.