ಮಂಗಳೂರು ಎನ್‌ಎಚ್ 66ರಲ್ಲಿ ಭೀಕರ ಅಪಘಾತ: ಕಾರು ರಾಜ ಕಾಲುವೆಗೆ ಬಿದ್ದು ಫೋಟೋಗ್ರಾಫರ್ ಸಾವು

Date:

spot_img

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೋಡಿಕಲ್ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ನಿಯಂತ್ರಣ ತಪ್ಪಿ ರಾಜ ಕಾಲುವೆಗೆ ಬಿದ್ದ ಪರಿಣಾಮವಾಗಿ ಕಾರು ಚಾಲಕನಾಗಿದ್ದ ಫೋಟೋಗ್ರಾಫರ್ ಸಾವನ್ನಪ್ಪಿದ್ದಾರೆ.

ಮೃತರನ್ನು ಪಣಂಬೂರು ಬಳಿಯ ಸೂರ್ಯ ನಾರಾಯಣ (48) ಎಂದು ಗುರುತಿಸಲಾಗಿದೆ. ಅವರು ನಂದೀಕೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಫೋಟೋಗ್ರಾಫಿಗಾಗಿ ತೆರಳುತ್ತಿದ್ದರು. ಈ ವೇಳೆ ಕೋಡಿಕಲ್ ಕ್ರಾಸ್ ಬಳಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ರಾಜ ಕಾಲುವೆಗೆ ಬಿದ್ದಿದೆ.

ಅಪಘಾತದ ನಂತರ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಧಾವಿಸಿ ಗಂಭೀರವಾಗಿ ಗಾಯಗೊಂಡ ಸೂರ್ಯ ನಾರಾಯಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆದರೆ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಸ್ಥಳದಲ್ಲಿ ಆಗಾಗ್ಗೆ ಕಾಲುವೆ ಶುದ್ಧೀಕರಣ ಹಾಗೂ ಪೊದೆಗಳ ಕಡಿತ ಕಾರ್ಯ ನಡೆಯುತ್ತಿದ್ದು, ರಸ್ತೆ ಬದಿಯು ಅಪಾಯಕಾರಿಯಾಗಿ ಬದಲಾದ ಹಿನ್ನೆಲೆ ಈ ದುರಂತ ಸಂಭವಿಸಿದ್ದಾಗಿದೆ. ಕಾರು ತೀವ್ರ ವೇಗದಲ್ಲಿದ್ದ ಕಾರಣ ನಿಯಂತ್ರಣ ತಪ್ಪಿದ ಸಾಧ್ಯತೆ ಇದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ