spot_img

ಮಂಗಳೂರಿನಲ್ಲಿ ರಾಜ್ಯದ ಇತಿಹಾಸದಲ್ಲೇ ದಾಖಲೆ ಮಾದಕ ವಸ್ತುಗಳ ಸೀಜ್: 75 ಕೋಟಿ ಮೌಲ್ಯದ ಎಂಡಿಎಂಎ ವಶ

Date:

ಮಂಗಳೂರು: ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಪ್ರಮಾಣದ ಮಾದಕ ವಸ್ತುಗಳನ್ನು (ಡ್ರಗ್ಸ್) ಸೀಜ್ ಮಾಡಿದ್ದಾರೆ ಮಂಗಳೂರು ಪೊಲೀಸರು. ಸುಮಾರು 75 ಕೋಟಿ ರೂಪಾಯಿಗಳ ಮೌಲ್ಯದ 37.87 ಕಿಲೋಗ್ರಾಂ ಎಂಡಿಎಂಎ (MDMA) ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮಾದಕ ವಸ್ತುಗಳನ್ನು ರಾಜ್ಯದ ವಿವಿಧ ಭಾಗಗಳು ಮತ್ತು ಇತರ ರಾಜ್ಯಗಳಿಗೆ ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾದ ಇಬ್ಬರು ನಾಗರಿಕರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಬಂಧಿತರಾಗಿರುವವರು ದಕ್ಷಿಣ ಆಫ್ರಿಕಾದ ನಾಗರಿಕರಾದ ಬಂಬಾ ಫಂಟಾ (31) ಮತ್ತು ಅಬಿಗೈಲ್ ಅಡೊನಿಸ್ (30) ಎಂಬ ಇಬ್ಬರು. ಇವರು ದೇಶದ ವಿವಿಧ ಭಾಗಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಬಿ ಪೊಲೀಸರ ದೀರ್ಘ ತನಿಖೆ:
ಈ ಘಟನೆಗೆ ಮುಂಚೆ, 2024ರಲ್ಲಿ ಪಂಪ್ ವೆಲ್ ಬಳಿಯ ಲಾಡ್ಜ್ ಒಂದರಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಹೈದರ್ ಆಲಿ ಎಂಬಾತನನ್ನು ಬಂಧಿಸಲಾಗಿತ್ತು. ಅವನಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ನೈಜೀರಿಯಾದ ನಾಗರಿಕ ಪೀಟರ್ ಇಕೆಡಿ ಬೆಲೊನ್ವೊ ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಅವನಿಂದ 6.248 ಕಿಲೋಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು.

ಈ ಘಟನೆಯ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಆರು ತಿಂಗಳ ಕಾಲ ನಡೆಸಿದ ತನಿಖೆಯಲ್ಲಿ ಈ ದೊಡ್ಡ ಮಾದಕ ವಸ್ತುಗಳ ಜಾಲವನ್ನು ಬಹಿರಂಗಪಡಿಸಿದ್ದಾರೆ. ತನಿಖೆಯ ಸಮಯದಲ್ಲಿ, ದೆಹಲಿಯಿಂದ ಬೆಂಗಳೂರು ಮತ್ತು ದೇಶದ ಇತರ ಭಾಗಗಳಿಗೆ ವಿಮಾನ ಮಾರ್ಗದ ಮೂಲಕ ಎಂಡಿಎಂಎ ಪೂರೈಕೆ ಮಾಡಲಾಗುತ್ತಿದ್ದ ಮಾಹಿತಿ ಪೊಲೀಸರಿಗೆ ದೊರಕಿತ್ತು.

ಬೆಂಗಳೂರಿನಲ್ಲಿ ಬಂಧನ:
ಮಾರ್ಚ್ 14ರಂದು, ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದ್ದ ದಕ್ಷಿಣ ಆಫ್ರಿಕಾದ ಇಬ್ಬರು ನಾಗರಿಕರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಬಂಧಿಸಲಾಯಿತು. ಅವರ ಬಳಿಯಿದ್ದ ಎರಡು ಟ್ರಾಲಿ ಬ್ಯಾಗ್ಗಳಲ್ಲಿ 37.585 ಕಿಲೋಗ್ರಾಂ ಎಂಡಿಎಂಎ ಮಾದಕ ವಸ್ತು ಮತ್ತು ನಾಲ್ಕು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಯಿತು. ಈ ಮಾದಕ ವಸ್ತುಗಳ ಮಾರುಕಟ್ಟೆ ಮೌಲ್ಯ ಸುಮಾರು 75 ಕೋಟಿ ರೂಪಾಯಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಿ.ಕೆ.ಶಿವಕುಮಾರ್ ಭೇಟಿಯಾದ ರಾಕಿ ರೈ: ಮುತ್ತಪ್ಪ ರೈ ಪುತ್ರನ ರಾಜಕೀಯ ನಂಟು ?

ಅಂಡರ್‌ವಲ್ಡ್ ಹಿನ್ನೆಲೆ ಹೊಂದಿದ್ದ ಮಾಜಿ ಡಾನ್ ಮುತ್ತಪ್ಪ ರೈ ಅವರ ಹಿರಿಯ ಪುತ್ರ ರಾಕಿ ರೈ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಖಾಸಗಿ ಭೇಟಿಗೆ ಆಗಮಿಸಿದ್ದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ದಿನಕ್ಕೆ ಒಂದು ಲೋಟ ಹಾಲು: ಆರೋಗ್ಯಕ್ಕೆ ಹತ್ತಿರದ ಅಮೃತ!

ಅತ್ಯಮೂಲ್ಯ ಪೋಷಕಾಂಶಗಳಿಂದ ತುಂಬಿರುವ ಹಾಲು, ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಅಮೃತತುಲ್ಯ ಪಾನೀಯ.

ಗರ್ಭಿಣಿ ಹಸುವನ್ನು ಕೊಂದು, ಕರುವನ್ನು ಚೀಲದಲ್ಲಿ ಎಸೆದ ಅಮಾನವೀಯತೆ: ಭಟ್ಕಳದಲ್ಲಿ ಆರೋಪಿ ಬಂಧನ

ಗರ್ಭಿಣಿ ಹಸುವನ್ನು ಕ್ರೂರವಾಗಿ ಕೊಂದು, ಅದರ ಹೊಟ್ಟೆಯಲ್ಲಿ ಇದ್ದ ಕರುವನ್ನು ಚೀಲದಲ್ಲಿ ಸುತ್ತಿ ನದಿಯ ದಡದಲ್ಲಿ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂಧನ ಬೆಲೆ ಏರಿಕೆ ಖಂಡಿಸಿ ಎ.26ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.