ಮಹಿಳೆಯ ಬಟ್ಟೆ ಬದಲಾಯಿಸುವ ದೃಶ್ಯದ ವಿಡಿಯೋ ಮಾಡಿ ಹಣ ವಸೂಲಿ ಯತ್ನ; ಯುವತಿ ಅರೆಸ್ಟ್.

Date:

spot_img

ಯುವತಿಯೊಬ್ಬಳು ಬಟ್ಟೆ ಬದಲಾಯಿಸುತ್ತಿದ್ದ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ ಮಾಡಿದ ಆರೋಪದಡಿ ಒಬ್ಬಳು ಮಹಿಳೆಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ, ಮೂಲತಃ ಚಿಕ್ಕಮಗಳೂರಿನ ನಿವಾಸಿ ನಿರೀಕ್ಷಾ ಎಂಬಾಕೆಯೇ ಬಂಧಿತ ಮಹಿಳೆ.

ಈ ಪ್ರಕರಣವು ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ರವಿವಾರ (ಅಕ್ಟೋಬರ್ 19) ನಿರೀಕ್ಷಾಳನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆಕೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಇತ್ತೀಚೆಗೆ ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿಯೂ ನಿರೀಕ್ಷಾ ವಿರುದ್ಧ ಹನಿ ಟ್ರ್ಯಾಪ್ ಆರೋಪ ಕೇಳಿಬಂದಿತ್ತು. ಬೆಳ್ಮಣ್‌ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಅಭಿಷೇಕ್ ಆಚಾರ್ಯ ಬರೆದಿರುವ ಡೆತ್ ನೋಟ್‌ನಲ್ಲಿ ನಿರೀಕ್ಷಾ ಹಾಗೂ ಇನ್ನು ಕೆಲವರ ಹೆಸರುಗಳನ್ನು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಾಳ ಬಂಧನಕ್ಕೆ ತೀವ್ರ ಆಗ್ರಹ ವ್ಯಕ್ತವಾಗಿತ್ತು.

ಒಬ್ಬ ಯುವತಿಯ ಖಾಸಗಿ ವಿಡಿಯೋ ಬಳಸಿ ಬ್ಲಾಕ್‌ಮೇಲ್ ಮಾಡಿದ ಆರೋಪದಡಿ ನಿರೀಕ್ಷಾಳನ್ನು ಬಂಧಿಸಿರುವುದು ಹಲವು ವಿವಾದಗಳಿಗೆ ಕಾರಣವಾಗಿರುವ ಈ ಘಟನೆಗೆ ಹೊಸ ತಿರುವು ನೀಡಿದಂತಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೀಟ್ ವಿವಾದ: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಚಿವ ಧರ್ಮೇಂದ್ರ ಪ್ರಧಾನ್

ನೀಟ್ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ರಾಜಭವನದಲ್ಲಿ ಸಿದ್ಧತೆ ಜೋರು

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ಶರವೇಗದಲ್ಲಿ ಸಾಗಿದೆ. ಹೈಕಮಾಂಡ್ ಅಂತಿಮ ನಿರ್ಧಾರದ ಕೌತುಕ ಹೆಚ್ಚಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪೆರ್ವಾಜೆ ಸಾಯಿಬಾಬಾ ಮಂದಿರ ಅರ್ಚಕ ಲಕ್ಷ್ಮೀನಾರಾಯಣ ಭಟ್ ನಿಧನ

ಕಾರ್ಕಳದ ಪೆರ್ವಾಜೆ ಸಾಯಿಬಾಬಾ ಮಂದಿರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.