ಉಡುಪಿ : ಮಣಿಪಾಲದ ಎಂಐಟಿ ಕಾಲೇಜು ಮುಂಭಾಗ ಖಾಸಗಿ ಬಸ್ ಚಕ್ರದಡಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬಸ್ ಧರ್ಮಸ್ಥಳದತ್ತ ತೆರಳುತ್ತಿತ್ತು. ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದ್ದು, ಮಹಿಳೆಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಮಣಿಪಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ನವವಿವಾಹಿತೆಯೊಬ್ಬರ ಶವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರೈಲ್ವೆ ಹಳಿ ಮೇಲೆ ಪತ್ತೆಯಾದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆ ಜಿಲ್ಲೆಯ ಅಣಜಿ ಗ್ರಾಮದ ವಿದ್ಯಾ (24) ಮೃತಪಟ್ಟ ದುರ್ದೈವಿ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್ ಇಲ್ಲಿನ ವಿದ್ಯಾರ್ಥಿಗಳಿಗೆ ಕಾರ್ಕಳ ಜೋಡುರಸ್ತೆಯ ಶ್ರೀದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ನಡೆಯಿತು.
ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ ಮತ್ತು ವಿಜಯ್ ರಾಘವೇಂದ್ರ ಅವರಿಬ್ಬರ ನಡುವೆ ಮದುವೆ ಸಂಬಂಧಿ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವಾಪಸಾಗಿ ಚರ್ಚೆ ಮೂಡಿಸಿದ್ದ ಹಿನ್ನೆಲೆಯಲ್ಲಿ ಇದೀಗ ಮೇಘನಾ ರಾಜ್ ಸ್ಪಷ್ಟನೆ ನೀಡಿದ್ದಾರೆ.