ಮಣಿಪಾಲದಲ್ಲಿ ಪೋಕ್ಸೋ ಪ್ರಕರಣ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ

Date:

spot_img

ಉಡುಪಿ: ಮಣಿಪಾಲದಲ್ಲಿ ಅಪ್ರಾಪ್ತ ಬಾಲಕಿಯ ಜೊತೆ ಯುವಕನೋರ್ವ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ನಡೆದಿದ್ದು, ಆತನ ವಿರುದ್ಧ ಪೋಕ್ಸೋ (POCSO) ಪ್ರಕರಣ ದಾಖಲಾಗಿದೆ.

ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರನಾದ ಶ್ರೀಶಾಂತ್ ಪೂಜಾರಿ (20) ಎಂಬಾತನೇ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ.

ಕಟಪಾಡಿ ಮಣಿಪುರದ ನಿವಾಸಿಯಾಗಿರುವ ಶ್ರೀಶಾಂತ್, ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಬಾಲಕಿಯ ಪೋಷಕರಿಗೆ ಈ ಮಾಹಿತಿ ತಿಳಿಯುತ್ತಿದ್ದಂತೆ, ಅವರು ನೇರವಾಗಿ ಪೊಲೀಸರೊಂದಿಗೆ ಲಾಡ್ಜ್‌ಗೆ ದಾಳಿ ನಡೆಸಿದ್ದಾರೆ.

ನಕಲಿ ಆಧಾರ್, ಎರಡು ದೂರುಗಳು

ಆರೋಪಿ ಶ್ರೀಶಾಂತ್, ಬಾಲಕಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಲು ನಕಲಿ ಆಧಾರ್ ಕಾರ್ಡ್ ಬಳಸಿದ್ದ ಎಂದು ತಿಳಿದುಬಂದಿದೆ. ಈ ಕೃತ್ಯದ ಹಿನ್ನೆಲೆಯಲ್ಲಿ ಪೊಲೀಸರು ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದ ಮಾಹಿತಿ ತಿಳಿದ ಇನ್ನೋರ್ವ ಬಾಲಕಿ ಸಹ ಶ್ರೀಶಾಂತ್ ವಿರುದ್ಧ ದೂರು ದಾಖಲಿಸಿದ್ದಾಳೆ. “ನನಗೂ ಶ್ರೀಶಾಂತ್ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದನು” ಎಂದು ಆಕೆ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

ಪೋಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.