
ಮಣಿಪಾಲ: ಮೂರ್ಛೆ ರೋಗದಿಂದ ಬಳಲುತ್ತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬಾಗಲಕೋಟೆ ಮೂಲದ ಮಲ್ಲಮ್ಮ ಗುರುಪ್ಪ ಅವರ ಮಗ ಸಾಯಿಗಣೇಶ (15) ಎಂದು ಗುರುತಿಸಲಾಗಿದೆ. ಸಾಯಿಗಣೇಶ ಸುಮಾರು ನಾಲ್ಕು ವರ್ಷಗಳಿಂದ ಮೂರ್ಛೆ ಕಾಯಿಲೆಯಿಂದ ಬಳಲುತ್ತಿದ್ದರು.
ಕಾಯಿಲೆಯಿಂದಾಗಿ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗುತ್ತಿರುವ ಬಗ್ಗೆ ಸಾಯಿಗಣೇಶ ತೀವ್ರ ಬೇಸರಗೊಂಡಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.