ಬೈಲೂರು .ಫೆಬ್ರವರಿ. 24 : ಬೈಲೂರು ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ತೀವ್ರವಾದ ಬೆಂಕಿ ಕಾಣಿಸಿಕೊಂಡಿದ್ದು ಸುತ್ತಮುತ್ತಲಿನ ಗುಡ್ಡಗಾಡುಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗುತ್ತಿವೆ. ಸುತ್ತಮುತ್ತಲಿನ ಮನೆ ಹಾಗೂ ಸ್ಥಳೀಯರಲ್ಲಿ ಆತಂಕದ ವಾತಾವರಣ ಉಂಟಾಗಿದ್ದು ಈಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.