ರಾಜ್ಯದಲ್ಲಿ ಬೃಹತ್ ಪೊಲೀಸ್ ನೇಮಕಾತಿ: 15,000 ಕಾನ್ಸ್‌ಟೇಬಲ್‌, 402 ಪಿಎಸ್‌ಐ ಹುದ್ದೆ ಭರ್ತಿಗೆ ಸಿದ್ಧತೆ – ಗೃಹ ಸಚಿವ ಪರಮೇಶ್ವರ್

Date:

spot_img

ಮಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಬಲವರ್ಧನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ 15 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು 402 ಪಿಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಸಿದ್ಧವಾಗಿದೆ. ಆದಷ್ಟು ಬೇಗ 402 ಪಿಎಸ್‌ಐ ಮತ್ತು 10 ರಿಂದ 15 ಸಾವಿರ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ” ಎಂದು ತಿಳಿಸಿದರು.

ಮಂಗಳೂರಿನ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸುವ ಬೇಡಿಕೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಬಗ್ಗೆ ಸಾಧಕ-ಬಾಧಕಗಳ ಕುರಿತು ಚರ್ಚಿಸಿ, ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಪೊಲೀಸ್ ಇಲಾಖೆಯನ್ನು ಬಲಪಡಿಸಲು ಸಿಬ್ಬಂದಿ ನೇಮಕಾತಿ ಅನಿವಾರ್ಯವಾಗಿದೆ ಎಂದು ಗೃಹ ಸಚಿವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸ್ಮೃತಿ ಮಂಧಾನ ಬಾಡಿ ಶೇಮಿಂಗ್: ಟ್ರೋಲರ್ಸ್‌ಗೆ ಕರಾರುವಾಕ್ ಉತ್ತರ

ಕ್ರಿಕೆಟರ್ ಸ್ಮೃತಿ ಮಂಧಾನ ಅವರಿಗೆ ಜಾಲತಾಣಗಳಲ್ಲಿ ಬಾಡಿ ಶೇಮಿಂಗ್ ಮಾಡಲಾಗಿದ್ದು, ಟ್ರೋಲರ್‌ಗಳಿಗೆ ಅವರು ದಿಟ್ಟ ಉತ್ತರ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಾಗ್ಪುರದಲ್ಲಿ ಧರ್ಮಾಂತರ ಯತ್ನ ಆರೋಪ; 2 ಮಂದಿ ಬಂಧನ

ನಾಗ್ಪುರದಲ್ಲಿ ಐಎಎಫ್ ಅಧಿಕಾರಿಯ ಪತ್ನಿಗೆ ದೌರ್ಜನ್ಯ, ಬ್ಲ್ಯಾಕ್‌ಮೇಲ್ ಹಾಗೂ ಧರ್ಮಾಂತರ ಯತ್ನ ಆರೋಪದ ಪ್ರಕರಣದಲ್ಲಿ 2 ಮಂದಿ ಬಂಧನ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಟ ದಳಪತಿ ವಿಜಯ್ ವಿಚ್ಛೇದನ ಪ್ರಕರಣ: ಕೋರ್ಟ್‌ಗೆ ಹಾಜರಾದ ದಂಪತಿ

ತಮಿಳು ನಟ ವಿಜಯ್ ಹಾಗೂ ಪತ್ನಿ ಸಂಗೀತಾ ವಿಚ್ಛೇದನ ಪ್ರಕರಣದ ವಿಚಾರಣೆ ಮುಂದೂಡಿಕೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಂದೀಪ್ ಮಂಜರಗಿ ಕೊಲೆ ಕೇಸ್: ಎಫ್‌ಎಸ್‌ಎಲ್ ಅಧಿಕಾರಿಗಳ ಬಂಧನ

ಬೆಳಗಾವಿಯ ಸಂದೀಪ್ ಮಂಜರಗಿ ಕೊಲೆ ಪ್ರಕರಣದಲ್ಲಿ ಎಫ್‌ಎಸ್‌ಎಲ್ ಅಧಿಕಾರಿಗಳ ಬಂಧನ ಹೊಸ ಸಂಚಲನ ಮೂಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ