spot_img

ವಿಜಯಪುರದ ಕೆನರಾ ಬ್ಯಾಂಕ್‌ನಲ್ಲಿ ಭಾರೀ ದರೋಡೆ – 59 ಕೆಜಿ ಚಿನ್ನ, ನಗದು ಕಳ್ಳತನ, ರಾಜ್ಯದ ಅತಿದೊಡ್ಡ ಪ್ರಕರಣ!

Date:

ವಿಜಯಪುರ: ರಾಜ್ಯದಲ್ಲಿನ ಬ್ಯಾಂಕ್ ಹಾಗೂ ಎಟಿಎಂ ದರೋಡೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗಲೇ ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಭಾರೀ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್‌ನಲ್ಲಿ ಅಂದಾಜು ₹52.26 ಕೋಟಿ ಮೌಲ್ಯದ 58 ಕೆಜಿ 976 ಗ್ರಾಂ ಚಿನ್ನಾಭರಣ ಹಾಗೂ ₹5.20 ಲಕ್ಷ ನಗದು ಕಳ್ಳತನವಾಗಿದೆ.

ಕೃತ್ಯವು ಮೇ 23ರಂದು ಸಂಜೆ 6 ಗಂಟೆಯಿಂದ ಮೇ 25ರ ಬೆಳಗ್ಗೆ 11:30ರ ನಡುವೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ ಅಧಿಕಾರಿಗಳು ಅಂದಾಜಿಸಿದಂತೆ ಒಟ್ಟು 59 ಕೆಜಿ ಚಿನ್ನ ಕಳವಾಗಿದೆ. ಇದು ಚಿನ್ನದ ಮೌಲ್ಯದ ಆಧಾರದ ಮೇಲೆ ರಾಜ್ಯದ ಇತಿಹಾಸದಲ್ಲಿಯೇ ಅತಿದೊಡ್ಡ ಬ್ಯಾಂಕ್ ದರೋಡೆ ಪ್ರಕರಣವೆಂದು ಹೇಳಲಾಗುತ್ತಿದೆ.

ಮೇ 26ರಂದು ಶಾಖೆ ನಿರ್ವಾಹಕರು ಪೊಲೀಸರಿಗೆ ದೂರು ದಾಖಲಿಸಿದ್ದರು. ಅದೇ ದಿನ ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿಗಳು ಕೆಲಸಕ್ಕೆ ಬಂದಾಗ ಸ್ವಚ್ಛತಾ ಕಾರ್ಯದರ್ಶಿ ಶಟರ್‌ನ ಬೀಗ ಕತ್ತರಿಸಿರುವುದು ಗಮನಿಸಿ ತಕ್ಷಣವೇ ಮಾಹಿತಿಯನ್ನು ಪೊಲೀಸರಿಗೆ ನೀಡಿದರು. ಕಳ್ಳರು ಬ್ಯಾಂಕ್‌ ರಜೆ ದಿನಗಳನ್ನು ಲೆಕ್ಕ ಹಾಕಿ ದರೋಡೆ ನಡೆಸಿರುವ ಸಾಧ್ಯತೆ ಇದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಿಗಿ ಮಾಧ್ಯಮದೊಂದಿಗೆ ಮಾತನಾಡುತ್ತಾ, ಪ್ರಕರಣದ ತನಿಖೆಗೆ ಎಂಟು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ತನಿಖೆ ಆರಂಭವಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಭರವಸೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಕ್ಯಾಪ್ಟನ್ ವಿಕ್ರಮ್ ಬತ್ರಾ ಜನ್ಮದಿನ

ನಮ್ಮ ದೇಶದ ಇತಿಹಾಸದಲ್ಲಿ ದೇಶಭಕ್ತಿ ಮತ್ತು ಧೈರ್ಯದ ಸಂಕೇತವಾಗಿ ನಿಂತಿರುವ ಹೆಸರುಗಳಲ್ಲಿ ಕ್ಯಾಪ್ಟನ್ ವಿಕ್ರಮ್ ಬತ್ರಾ ಅವರದ್ದು ಅಮರ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.