
ಉಡುಪಿ : ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಬಲಪಾಡಿ ಗ್ರಾಮ ಪಂಚಾಯತ್ ಎದುರು ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷರ ಕರೆಯಂತೆ ರಾಜ್ಯ ಕಾಂಗ್ರೆಸ್ ಸರಕಾರದಿಂದ ಜನತೆ ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಶಾಸಕರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ಎದುರು ನಡೆದ ಧರಣಿ ಸತ್ಯಾಗ್ರಹದಲ್ಲಿ 9/11 ನಿವೇಶನಗಳ ಸಮಸ್ಯೆಗಳ ಪರಿಹಾರಕ್ಕೆ ಅಗ್ರಹಿಸಿ, ಆಕ್ರಮ ಸಕ್ರಮ ತಿರಸ್ಕರಿಸುವುದನ್ನು ಖಂಡಿಸಿ, ಆಶ್ರಯ ಮನೆಗಳ ಮಂಜೂರಾತಿಗೆ ಒತ್ತಾಯಿಸಿ, ವೃದ್ಯಾಪ್ಯ ವೇತನ-ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೊಳಿಸಲು ಅಗ್ರಹಿಸಿ, ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಅಂಬಲಪಾಡಿ-ಕಡೆಕಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿ ರಾಜ್ಯ ಸರಕಾರದ ಜನವಿರೋಧಿ ನೀತಿಯನ್ನು ಎಳೆ ಎಳೆಯಾಗಿ ಬಿಡಿಸಿ ಖಂಡಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಗಿರೀಶ್ ಅಮೀನ್ ಕಿದಿಯೂರು, ಯೋಗೀಶ್ ಶೆಟ್ಟಿ ಅಂಬಲಪಾಡಿ, ರಾಮರಾಜ್ ಕಿದಿಯೂರು, ಮಹೇಂದ್ರ ಕೋಟ್ಯಾನ್, ನಾಗರಾಜ್ ಕರ್ಕೇರ, ವಿಜಯ ಶೆಟ್ಟಿ, ಹರೀಶ್ ಆಚಾರ್ಯ, ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತಾ ಯೋಗೀಶ್ ಶೆಟ್ಟಿ, ಉಪಾಧ್ಯಕ್ಷೆ ಸುಜಾತಾ ಸುಧಾಕರ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ರಾಜೇಶ್ ಸುವರ್ಣ, ಭಾರತಿ ಭಾಸ್ಕರ್, ಸೋಮನಾಥ್ ಬಿ.ಕೆ., ಸುನಿಲ್ ಕುಮಾರ್ ಕಪ್ಪೆಟ್ಟು, ಕುಸುಮಾ ಕಿಶೋರ್, ಹರೀಶ್ ಪಾಲನ್, ರೋಹಿಣಿ ಎಸ್. ಪೂಜಾರಿ, ಶಕುಂತಳಾ ಶೆಟ್ಟಿ, ಸುಮಂಗಲಾ, ಸುಂದರ ಪೂಜಾರಿ, ಉಷಾ ಶೆಟ್ಟಿ, ಶಶಿಧರ್ ಸುವರ್ಣ, ಸಬಿತಾ ಸಹಿತ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.