spot_img

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Date:

ಕಾರ್ಕಳ/ಉಡುಪಿ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ರಾಜ್ಯಮಟ್ಟದಲ್ಲಿ 10 ರೊಳಗಿನ ರ‍್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4 ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ, 595 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 5 ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನಿಗಳಾದ ಕಾರ್ಕಳ ಜ್ಞಾನಸುಧಾದ ಶ್ರೀ ರಕ್ಷಾ ಆರ್ ನಾಯಕ್, ವಿಶ್ವಾಸ್ ಆತ್ರೇಯಾಸ್ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಅಪೂರ್ವ್ ವಿ ಕುಮಾರ್ ಮತ್ತು ವಾಣಿಜ್ಯ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ 6 ನೇ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನಿಗಳಾದ ಕಾರ್ಕಳ ಜ್ಞಾನಸುಧಾದ ಕು.ಸಹನಾ ನಾಯಕ್ ಮತ್ತು ತನ್ವಿ ರಾವ್ ಇವರೊಂದಿಗೆ ಇತರ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಟ್ರಸ್ಟಿ ಅನಿಲ್ ಕುಮಾರ್ ಜೈನ್, ಕಾರ್ಕಳ ಜ್ಞಾನಸುಧಾದ ಸಿ.ಇ.ಒ ದಿನೇಶ್ ಎಂ ಕೊಡವೂರ್, ಉಡುಪಿ ಜ್ಞಾನಸುಧಾದ ಪ್ರಾಂಶುಪಾಲರಾದ ಶ್ರೀ ಸಂತೋಷ್ ಹಾಗೂ ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲರಾದ ಶ್ರೀ ಗಣೇಶ್ ಶೆಟ್ಟಿ, ಸಾಧಕ ವಿದ್ಯಾರ್ಥಿಗಳ ಹೆತ್ತವರು ಹಾಗೂ ಹಿತೈಷಿಗಳಾದ ತ್ರಿವಿಕ್ರಮ ಕಿಣಿ ಹಾಗೂ ದೇವೇಂದ್ರ ನಾಯಕ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.ಆಂಗ್ಲಭಾಷಾ ಮುಖ್ಯಸ್ಥೆ ಶ್ರೀಮತಿ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶೃಂಗೇರಿ ಮಠದ ಬಳಿ ಅನುಮಾನಾಸ್ಪದ ಜೋಡಿ: ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಹಸ್ತಾಂತರ

ಈ ಘಟನೆಗೆ ಪೊಲೀಸರು ತಕ್ಷಣ ಪ್ರತಿಕ್ರಿಯಿಸಿ, ಜೋಡಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ತನಿಖೆ ನಡೆಸುತ್ತಿದ್ದಾರೆ

ಜಿಲ್ಲೆಯ ಸಂಸದರು ಮತ್ತು ಶಾಸಕರೊಂದಿಗೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಮಾಲೋಚನೆ : ಜೂ.16ರಂದು ಜವಾಬ್ದಾರಿ ಸ್ವೀಕಾರ

ಜೂ.16ರಂದು ಬೆಳಿಗ್ಗೆ 11.30ಕ್ಕೆ ನೂತನ ಜಿಲ್ಲಾಧ್ಯಕ್ಷರ ಜವಾಬ್ದಾರಿ ಸ್ವೀಕಾರ ಕಾರ್ಯಕ್ರಮವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ

ನೀಟ್-2025ರ ಫಲಿತಾಂಶ ಜ್ಞಾನಸುಧಾದ 20 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಜನರಲ್ ಮೆರಿಟ್ ನಲ್ಲಿ ಹತ್ತು ಸಾವಿರದೊಳಗಿನ ರ‍್ಯಾಂಕ್

ವಿದ್ಯಾರ್ಥಿಗಳ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಪರಿಶ್ರಮವನ್ನು ಶ್ಲಾಘಸಿದ್ದಾರೆ.

ಹೋಂ ಮಿನಿಸ್ಟರ್ ಪರಮೇಶ್ವರ್ ಕೋಟ ಪೊಲೀಸ್ ಠಾಣೆಗೆ ಸರ್ಪ್ರೈಸ್ ವಿಸಿಟ್

ಗೃಹ ಸಚಿವರು ಠಾಣೆಯ ರಿಜಿಸ್ಟರ್ ಪುಸ್ತಕವನ್ನು ಪರಿಶೀಲಿಸಿ, ಅಲ್ಲಿ ದಾಖಲಾಗಿದ್ದ ಕೆಲವು ದೂರುಗಳ ಬಗ್ಗೆ ವಿವರ ತಿಳಿದುಕೊಂಡರು