spot_img

ನಡುರಾತ್ರಿ ಕತ್ತಿಯಿಂದ ದಾಳಿ: ಮಲಗಿದ್ದ ತಂದೆಗೆ ಹಲ್ಲೆ – ಮಗಳ ಬೊಬ್ಬೆಯಿಂದ ತಪ್ಪಿದ ಪ್ರಾಣಾಪಾಯ

Date:

spot_img

ಉಡುಪಿ : ಉಡುಪಿ ಜಿಲ್ಲೆಯಲ್ಲಿ ನಡುರಾತ್ರಿ ನಡೆದ ಭೀಕರ ಘಟನೆಯಲ್ಲಿ ಮಲಗಿದ್ದ ಕೂಲಿ ಕಾರ್ಮಿಕನೊಬ್ಬನ ಮೇಲೆ ಕತ್ತಿಯಿಂದ ದುಷ್ಕರ್ಮಿಯೊಬ್ಬ ದಾಳಿ ನಡೆಸಿದ ಪ್ರಕರಣ ವರದಿಯಾಗಿದೆ. ಆದರೆ ಮಗಳ ಸಮಯೋಚಿತ ಎಚ್ಚರಿಕೆಯಿಂದ ದೊಡ್ಡ ಅನಾಹುತ ತಪ್ಪಿದ್ದು, ಗಾಯಗೊಂಡ ತಂದೆಯನ್ನು ವಿಶು ಶೆಟ್ಟಿ ಅಂಬಲಪಾಡಿ ಹಾಗೂ ಸ್ಥಳೀಯರು ರಕ್ಷಿಸಿದ್ದಾರೆ.

ಘಟನೆ ಆದಿ ಉಡುಪಿಯಲ್ಲಿರುವ ನಿವಾಸವೊಂದರಲ್ಲಿ ಶನಿವಾರ ರಾತ್ರಿ ನಡೆದಿದೆ. ಕರಬಸಪ್ಪ (43) ಎಂಬ ಕೂಲಿ ಕಾರ್ಮಿಕ ಮಗಳೊಂದಿಗೆ ಮನೆಯೊಳಗೆ ಮಲಗಿದ್ದ ವೇಳೆ, ಸ್ಥಳೀಯ ನಿವಾಸಿ ಕುಮಾರ್ ಎಂಬಾತ ಕತ್ತಿ ಹಿಡಿದು ಮನೆಯೊಳಗೆ ನುಗ್ಗಿ, ಮಲಗಿದ್ದ ಕರಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಮಗಳು ಬೊಬ್ಬೆ ಹಾಕಿದ ಶಬ್ದ ಕೇಳಿ ಸ್ಥಳೀಯರು ಧಾವಿಸಿದ್ದಾರೆ.

ಗಂಭೀರ ಗಾಯಗೊಂಡ ಕರಬಸಪ್ಪರವರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ತಕ್ಷಣ ಸ್ಥಳಕ್ಕೆ ಧಾವಿಸಿ ತಮ್ಮ ವಾಹನದಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಲು ನೆರವಾಗಿದ್ದಾರೆ. ಬಳಿಕ ವೈದ್ಯರ ಸಲಹೆಯಂತೆ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿ ಕುಮಾರ್‌ನನ್ನು ಬಂಧಿಸಿ, ಹಲ್ಲೆಗೆ ಬಳಸಿದ್ದ ಕತ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡ್ರ‍್ಯಾಗನ್ ಫ್ರೂಟ್: ಆರೋಗ್ಯ ಪ್ರಯೋಜನಗಳು ಮತ್ತು ಅದನ್ನು ಬಳಸುವ ವಿಧಾನ

ಪಿಟಾಯ ಅಥವಾ ಪಿಟಾಹಯಾ ಎಂದೂ ಕರೆಯಲ್ಪಡುವ ಡ್ರ‍್ಯಾಗನ್ ಫ್ರೂಟ್, ಅದರ ಆಕರ್ಷಕ ನೋಟ, ಸೌಮ್ಯವಾದ ಸಿಹಿ ರುಚಿ ಮತ್ತು ಸಮೃದ್ಧ ಪೌಷ್ಟಿಕಾಂಶಗಳಿಂದ ವಿಶ್ವದಾದ್ಯಂತ ಜನಪ್ರಿಯತೆಯನ್ನು ಗಳಿಸಿದೆ.

ಸಂಗೀತ ಕಲಾವಿದೆ ಮಹಿಮಾ ಬಜಗೋಳಿ ಅವರು “ಚಂದನ ಸಂಗೀತ ರತ್ನ ಪ್ರಶಸ್ತಿ” ಗೆ ಆಯ್ಕೆ

ವಿಶಿಷ್ಟ ಕಂಠದ ಸಂಗೀತಗಾರ್ತಿ, ಗಾಯಕಿ ಹಾಗೂ ನಿರೂಪಕಿಯಾದ ಮಹಿಮಾ ಬಜಗೋಳಿ ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಚಂದನ ಸಂಗೀತ ರತ್ನ ಪ್ರಶಸ್ತಿ" ಗೆ ಆಯ್ಕೆಯಾಗಿದ್ದಾರೆ.

ಛತ್ತೀಸ್ಗಡದಲ್ಲಿ ಬಂಧಿಸಿರುವ ಸಿಸ್ಟರ್ ಗಳ ಬಿಡುಗಡೆಗೆ ಒತ್ತಾಯ, ಕ್ರೈಸ್ತ ಸಂಘಟನೆಯ ಸಮಯ ಸಾಧಕ ನಡೆ ಖಂಡನೀಯ : ರುಡಾಲ್ಪ್ ಡಿ’ಸೋಜ

ಇತ್ತೀಚಿಗೆ ಛತ್ತೀಸ್ಗಡದಲ್ಲಿ ನಡೆದ ಎರಡು ಸಿಸ್ಟರ್ ಗಳ ಬಂಧನಕ್ಕೆ ಸಂಬಂಧಿಸಿದಂತೆ ಸರಕಾರ ಕೂಡಲೇ ತನಿಖೆಯನ್ನು ತೀವ್ರಗೊಳಿಸಿ ಬಂಧಿತರಾಗಿರುವ ಸಿಸ್ಟರ್ ಗಳನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ'ಸೋಜ ಒತ್ತಾಯಿಸಿದ್ದಾರೆ.

ಧರ್ಮಸ್ಥಳ ಪ್ರಕರಣದ ವರದಿ ಪ್ರಸಾರಕ್ಕೆ ಹೈಕೋರ್ಟ್‌ ಗ್ರೀನ್ ಸಿಗ್ನಲ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದು!

ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತು ಹಾಕಿರುವ ಕುರಿತು ಅನಾಮಧೇಯ ಸಾಕ್ಷಿದಾರರು ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಮೇಲೆ ವಿಧಿಸಲಾಗಿದ್ದ ಸುದ್ದಿ ಪ್ರಸಾರ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಮಹತ್ವದ ತೀರ್ಪು ನೀಡಿದೆ.