
ಬ್ರಹ್ಮಾವರ : ಬ್ರಹ್ಮಾವರದ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿನಿಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಸಮಾಧಾನಕರ ಬೆಳವಣಿಗೆಯಾಗಿದೆ. ಹಾಸ್ಟೆಲಿನಿಂದ ಮನೆಗೆ ಹೋಗುವುದಾಗಿ ಹೇಳಿ ಹೊರಟಿದ್ದ ವಿದ್ಯಾರ್ಥಿನಿ, ಮನೆಗೆ ಅಥವಾ ಹಾಸ್ಟೆಲ್‌ಗೆ ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪೊಲೀಸ್ ಇಲಾಖೆ ಮತ್ತು ಕುಟುಂಬಸ್ಥರ ಹುಡುಕಾಟದ ನಂತರ, ವಿದ್ಯಾರ್ಥಿನಿಯು ಸ್ವತಃ ತಾನು ಬೆಂಗಳೂರಿನಲ್ಲಿ ಇರುವುದಾಗಿ ಕುಟುಂಬಕ್ಕೆ ತಿಳಿಸಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ವಾಪಸು ಬರುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿಯ ನಾಪತ್ತೆಯ ಹಿಂದಿನ ಕಾರಣಗಳು ಮತ್ತು ಅವರು ಬೆಂಗಳೂರಿಗೆ ತೆರಳಿದ ಬಗೆಗಿನ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಬ್ರಹ್ಮಾವರ ಪೊಲೀಸರು ಮುಂದಿನ ಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿನಿಯನ್ನು ಕರೆತರುವ ಪ್ರಕ್ರಿಯೆ ನಡೆಯುತ್ತಿದೆ.