ಉಳ್ಳಾಲದಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತೇಜಸ್ : ಶವವಾಗಿ ರೈಲ್ವೇ ಹಳಿಯಲ್ಲಿ ಪತ್ತೆ, ಆತ್ಮಹತ್ಯೆಯ ಶಂಕೆ

Date:

spot_img

ಉಳ್ಳಾಲ: ಬುಧವಾರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದ ಉಚ್ಚ ಶಿಕ್ಷಣ ಪಡೆಯುತ್ತಿದ್ದ ಯುವಕ ತೇಜಸ್ (24) ಅವರ ಛಿದ್ರಗೊಂಡ ಮೃತದೇಹ ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ.

ಮೃತ ತೇಜಸ್, ಉಳ್ಳಾಲ ತಾಲೂಕಿನ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಕೆಂಪು ಮಣ್ಣು ನಿವಾಸಿ, ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ಉದ್ಯೋಗಿ ಮೋಹನ್ ದಾಸ್ ಎಸ್. ಅಮೀನ್ ಅವರ ಪುತ್ರ. ಮಣಿಪಾಲದ ಪ್ರತಿಷ್ಠಿತ ವಿದ್ಯಾಸಂಸ್ಥೆಯೊಂದರಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ರಾತ್ರಿ ತಮ್ಮ ಮನೆಯ ಬೆಡ್‌ರೂಮ್‌ಗೆ ಹೋಗಿದ್ದ ತೇಜಸ್, ಗುರುವಾರ ಬೆಳಗ್ಗೆ ತಮ್ಮ ಮೊಬೈಲ್ ಫೋನನ್ನು ಮನೆಯಲ್ಲೇ ಬಿಟ್ಟು ನಾಪತ್ತೆಯಾಗಿದ್ದರು.

ತೇಜಸ್ ಪತ್ತೆಯಾಗದ ಕಾರಣ, ಅವರ ತಂದೆ ಮೋಹನ್ ದಾಸ್ ಅವರು ನಿನ್ನೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ನಿನ್ನೆ ಬೆಳಗ್ಗೆಯೇ ಉಚ್ಚಿಲ ಸಂಕೋಳಿಗೆಯ ರೈಲ್ವೇ ಹಳಿಯಲ್ಲಿ ಅಪರಿಚಿತ ಯುವಕನ ಮೃತದೇಹವೊಂದು ಪತ್ತೆಯಾಗಿತ್ತು. ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ನಂತರ, ರೈಲ್ವೇ ಹಳಿಯಲ್ಲಿ ಪತ್ತೆಯಾದ ಮೃತದೇಹ ತೇಜಸ್ ಅವರದೆಂದು ಪೋಷಕರು ಗುರುತು ಪತ್ತೆ ಹಚ್ಚಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.