spot_img

ಇಂದು ಮಿಯ್ಯಾರು ಕಂಬಳ: 276 ಜೋಡಿ ಕೋಣಗಳ ಸ್ಪರ್ಧೆ

Date:

spot_img

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಕಂಬಳ, ತನ್ನ ಜೋಡುಕರೆ ಕಂಬಳಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿ ಪ್ರತಿವರ್ಷ ಅತಿ ಹೆಚ್ಚು ಜೋಡಿ ಕೋಣಗಳು ಭಾಗವಹಿಸುವುದು ವಿಶೇಷ. ಈ ಬಾರಿಯೂ ಇಂದು ನಡೆಯಲಿರುವ ಈ ಕಂಬಳಕ್ಕೆ 276 ಜೋಡಿ ಕೋಣಗಳು ಭಾಗವಹಿಸಲಿವೆ ಎಂದು ಸಮಿತಿಯ ಪ್ರಕಾರ್ಯದರ್ಶಿ ಗುಣಪಾಲ ಕಡಂಬ ತಿಳಿಸಿದ್ದಾರೆ.

ಮಿಯ್ಯಾರು ಕಂಬಳದ ಇತಿಹಾಸ ಹಳೆಯದು. 2004ರಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಅಧೀನದ ಜಾಗದಲ್ಲಿ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಮತ್ತು ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪ್ರಯತ್ನದಿಂದ ಈ ಕಂಬಳ ಪುನರಾರಂಭವಾಯಿತು. ಪ್ರಸ್ತುತ ಜೀವನ್ದಾಸ್ ಭಂಡಾರಿ ಅವರ ನೇತೃತ್ವದಲ್ಲಿ ಕಂಬಳ ನಡೆಯುತ್ತಿದೆ. ಕ್ಷೇತ್ರದ ಶಾಸಕರು ಕಂಬಳ ಸಮಿತಿಯ ಅಧ್ಯಕ್ಷರಾಗಿರುವುದು ಇಲ್ಲಿ ವಿಶೇಷ.

ಕಂಬಳದ ಸಂಘಟನೆ ಮತ್ತು ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಶಾಸಕ ಗೋಪಾಲ ಭಂಡಾರಿ, ಪ್ರಸ್ತುತ ಶಾಸಕ ಸುನಿಲ್ ಕುಮಾರ್ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೆರವು ಮುಖ್ಯವಾಗಿದೆ. ಕಂಬಳಕ್ಕೆ ಮೂಲಸೌಕರ್ಯಗಳನ್ನು ಒದಗಿಸಲಾಗಿದ್ದು, ವರ್ಷದ 12 ತಿಂಗಳೂ ಕೋಣಗಳಿಗೆ ತರಬೇತಿ ನೀಡುವ ವ್ಯವಸ್ಥೆ ಇದೆ.

ಮಿಯ್ಯಾರು ಕಂಬಳದಲ್ಲಿ ಕನೆ ಹಲಗೆ, ಹಗ್ಗ, ನೇಗಿಲು ಮತ್ತು ಅಡ್ಡ ಹಲಗೆ ಎಂಬ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತವೆ. ಇದರ ಜೊತೆಗೆ, ಮೂಡುಬಿದಿರೆ ಕಂಬಳದಂತೆ ಇಲ್ಲಿಯೂ ಅತಿ ಹೆಚ್ಚು ಜೋಡಿ ಕೋಣಗಳು ಭಾಗವಹಿಸುವುದು ಗಮನಾರ್ಹ. ಈ ವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ. ಕಂಬಳದ ಸಂಘಟನೆ ಮತ್ತು ಯಶಸ್ಸಿಗೆ ಸ್ಥಳೀಯರು ಮತ್ತು ಸಮಿತಿ ಸದಸ್ಯರು ಕಾರ್ಯನಿರ್ವಹಿಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಮಲ್ ಹಾಸನ್ ರಾಜ್ಯಸಭೆ ಪ್ರವೇಶ: ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕಾರ!

ಬಹುಭಾಷಾ ನಟ ಕಮಲ್ ಹಾಸನ್ ಅವರು ಶುಕ್ರವಾರ (ಜುಲೈ 25) ಮೊದಲ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಿದ್ದು, ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಮದ್ಯ, ತಂಬಾಕು, ತಂಪು ಪಾನೀಯಗಳ ಬೆಲೆ ಶೇ.50ರಷ್ಟು ಹೆಚ್ಚಳಕ್ಕೆ WHO ಕರೆ: ಕುಡುಕರಿಗೆ ಮತ್ತೊಂದು ಶಾಕ್!

ಕರ್ನಾಟಕದಲ್ಲಿ ಮದ್ಯದ ಬೆಲೆ ಈಗಾಗಲೇ ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ ಎರಡು ವರ್ಷಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳವಾಗಿದ್ದು, ಬಿಯರ್ ದರವೂ ಏರಿಕೆಯಾಗಿದೆ.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಜಾವೀದ್ ಪಾಷಾಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆ!

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮೆಹದಿ ನಗರದ ಜಾವೀದ್ ಪಾಷ (34) ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಮಂಗಳೂರು ಜೈಲಿನಲ್ಲಿ ಹಫ್ತಾ ವಸೂಲಿ: ನಾಲ್ವರು ಕೈದಿಗಳ ವಿರುದ್ಧ ‘ಕೆ-ಕೋಕಾ’ ಕಾಯ್ದೆ ದಾಖಲು!

ಮಂಗಳೂರು ಜಿಲ್ಲಾ ಜೈಲಿನೊಳಗೆ (Mangalore jail extortion) ಸಹಕೈದಿಗಳ ಮೇಲೆ ಹಫ್ತಾ ವಸೂಲಿ ಮತ್ತು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.