spot_img

ಜಲಜೀವನ್ ಮಿಷನ್ ಹಾಗೂ ವಾರಾಹಿ ಯೋಜನೆಯ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶಾಸಕ ವಿ ಸುನಿಲ್ ಕುಮಾರ್

Date:

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಈಗಾಗಲೇ ಚಾಲ್ತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಲಜೀವನ್ ಮಿಷನ್ ಯೋಜನೆ ಹಾಗೂ ವಾರಾಹಿ ಯೋಜನೆ ಅನುಷ್ಠಾನದ ಕುರಿತು ಸಂಬಂದಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸನ್ಮಾನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಗಂಗೆ ಎಂಬ ಘೋಷವಾಕ್ಯದೊಂದಿಗೆ ಎಲ್ಲಾ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ, ಈ ಯೋಜನೆ ಸಿದ್ಧಪಡಿಸಲಾಗಿರುತ್ತದೆ. ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಪ್ರಸ್ತುತ ಲಭ್ಯವಿರುವ ಜಲಮೂಲಗಳನ್ನು ಬಳಸಿಕೊಂಡು ಹಾಗೂ ಜಲಜೀವನ್ ಮಿಷನ್ ಯೋಜನೆಯಡಿ ಪೈಪ್ ಲೈನ್ ಸಂಪರ್ಕಗಳನ್ನು ವಿಸ್ತರಣೆ ಮಾಡಿರುವ ಕುರಿತು ಜೊತೆಗೆ ಅತ್ಯಂತ ಮಹತ್ತ್ವಕಾಂಕ್ಷಿ ವಾರಾಹಿ ಯೋಜನೆಯ ಕಾಮಗಾರಿಗಳ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸುಧೀರ್ಘವಾಗಿ ಚರ್ಚಿಸಲಾಯಿತು.

ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 62 ಓವರ್ ಹೆಡ್ ಟ್ಯಾಂಕ್ ಗಳು, 1524.35 ಕಿ.ಮೀಟರ್ ಪೈಪ್ ಲೈನ್ ಅಳವಡಿಕೆ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ 23 ಓವರ್ ಹೆಡ್ ಟ್ಯಾಂಕ್ ಗಳು, 416.25 ಕಿ.ಮೀಟರ್ ವ್ಯಾಪ್ತಿಯ ಪೈಪ್ ಲೈನ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದು, ವಾರಾಹಿ ಯೋಜನೆಯಡಿ ಈಗಾಗಲೇ ಕ್ಷೇತ್ರ ವ್ಯಾಪ್ತಿಯಲ್ಲಿ 72 ಓವರ್ ಹೆಡ್ ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿಕೆ ಕಾಮಗಾರಿಗಳು ಪ್ರಗತಿಯಲ್ಲಿ ಇರುವುದಾಗಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು, ಸಪ್ಟೆಂಬರ್ ಅಂತ್ಯದ ಒಳಗಾಗಿ ಎಲ್ಲಾ ಓವರ್ ಹೆಡ್ ಟ್ಯಾಂಕ್‌ ಕಾಮಗಾರಿ ಹಾಗೂ ಪೈಪ್ ಲೈನ್ ಅಳವಡಿಕೆ ಕಾಮಗಾರಿಗಳನ್ನು ಯಾವುದೇ ಸಾರ್ವಜನಿಕ ದೂರಿಗೆ ಆಸ್ಪದ ನೀಡದಂತೆ ಸರ್ಕಾರ ನಿಗದಿಪಡಿಸಿರುವ ಮೇಲ್ವಿಚಾರಣಾ ಏಜೆನ್ಸಿಯವರು ನಿರಂತರವಾಗಿ ಪರಿವೀಕ್ಷಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ವರಾಹಿ ಯೋಜನೆ ಕುರಿತಂತೆ ಚಾರ ಗ್ರಾಮದಲ್ಲಿ ಸುಮಾರು 08.00 ಲಕ್ಷ ಲೀಟರ್ ಸಾಮರ್ಥ್ಯದ ನೀರು ಪಂಪ್ ಸ್ಟೇಷನ್ ಕಾಮಗಾರಿ ಹಾಗೂ ಮಿಯಾರು ಗ್ರಾಮದಲ್ಲಿ, ಸುಮಾರು 05.50 ಲಕ್ಷ ಲೀಟರ್ ಸಾಮರ್ಥ್ಯದ ಪಂಪ್ ಸ್ಟೇಷನ್ ನಿರ್ಮಾಣ ಕಾಮಗಾರಿಗಳು ಆರಂಭವಾಗಲಿದ್ದು, ಸಂಪೂರ್ಣ ಗುರುತ್ವಾಕರ್ಷಣೆ ಮೂಲಕ ಓವರ್‌ ಹೆಡ್ ಟ್ಯಾಂಕ್ ಗಳಿಗೆ ನೀರು ಸರಬರಾಜು ಮಾಡುವ ಯೋಜನೆ ಇದಾಗಿದ್ದು ಕಾಮಗಾರಿಯ ಗುಣಮಟ್ಟ, ಕಾಯ್ದುಕೊಂಡು ಸಮರ್ಪಕ ರೀತಿಯಲ್ಲಿ ಈ ಮಹತ್ವಕಾಂಕ್ಷಿ ಯೋಜನೆಯನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಹಾಗೂ ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ ಆಗಿರುವ ಕಾಮಗಾರಿಗಳನ್ನು ಖುದ್ದು ಪರಿಶೀಲಿಸುವುದಾಗಿ ತಿಳಿಸಲಾಯಿತು.

ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಯೋಜನಾಧಿಕಾರಿಯವರಾದ ಶ್ರೀ ಉದಯ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ ಉಡುಪಿ ವಿಭಾಗದ ಕಾರ್ಯನಿವಾಹಕ ಇಂಜಿನಿಯರ್ ಶ್ರೀ ಉದಯ ಕುಮಾ‌ ಶೆಟ್ಟಿ, ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಶ್ರೀ ಸುರೇಂದ್ರನಾಥ್, ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಕಾರ್ಯನಿರ್ವಣಾಧಿಕಾರಿಗಳಾದ ಶ್ರೀ ಪ್ರಶಾಂತ್ ರಾವ್, ಮತ್ತು ಶ್ರೀಮತಿ ವಿಜಯ, ಉಭಯ ತಾಲೂಕಿನ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಹಾಗೂ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಇಂಜಿನಿಯರ್ ಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.