ಪ್ರಾಕೃತಿಕ ವಿಕೋಪ ಪರಿಹಾರ ಬಿಡುಗಡೆಗೆ ಶಾಸಕ ವಿ. ಸುನಿಲ್ ಕುಮಾರ್ ಸಿ.ಎಂ ಗೆ ಪತ್ರ

Date:

spot_img
sunil kumar11

ಬೆಂಗಳೂರು: 2024-25 ಹಾಗೂ 2025-26 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ಸೇರಿದಂತೆ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತೀ ಹೆಚ್ಚು ಮಳೆಯಾಗಿದ್ದು, ಪರಿಣಾಮ ನೆರೆ–ಪ್ರವಾಹದಿಂದಾಗಿ ಹಲವಾರು ರಸ್ತೆ, ಸೇತುವೆಗಳು ಹಾಗೂ ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ.

2024-25ನೇ ಸಾಲಿನಲ್ಲಿ ಸಲ್ಲಿಸಲಾದ ಪ್ರಸ್ತಾವನೆಯ ಅಂದಾಜು ನಷ್ಟದ ಮೊತ್ತ ಲೋಕೋಪಯೋಗಿ ಇಲಾಖೆ 2723.00 ಲಕ್ಷ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ 2254.00 ಲಕ್ಷ, ನಗರಾಭಿವೃದ್ಧಿ ಇಲಾಖೆ 500.00 ಲಕ್ಷ ಹಾಗಾಗಿ ಒಟ್ಟು ಅಂದಾಜು ನಷ್ಟದ ಮೊತ್ತ 5477.00 ಲಕ್ಷ ರೂಪಾಯಿ ಆಗಿರುತ್ತದೆ. ಆದರೆ ಬಿಡುಗಡೆಯಾದ ಅನುದಾನ ಲೊಕೋಪಯೋಗಿ ಇಲಾಖೆ 140.00, ಗ್ರಾಮೀಣಾಭಿವೃದ್ದಿ ಇಲಾಖೆ 120.00 ಲಕ್ಷ, ನಗರಾಭಿವೃದ್ದಿ ಇಲಾಖೆ 16.75. ಲಕ್ಷ ಬಿಡುಗಡೆಯಾಗಿದ್ದು ಒಟ್ಟಾರೆ 276.75 ಲಕ್ಷ ರೂಪಾಯಿ ಅನುದಾನ ಮಾತ್ರ ಬಿಡುಗಡೆ ಆಗಿರುತ್ತದೆ. ಪ್ರಸಕ್ತ 2025-26 ಸಾಲಿನಲ್ಲಿ ಜುಲೈ 20ರವರೆಗೆ ಪ್ರಸ್ತಾವನೆ ಸಲ್ಲಿಸಿದ ಅಂದಾಜು ನಷ್ಟದ ಮೊತ್ತ ಲೋಕೋಪಯೋಗಿ ಇಲಾಖೆ 1623.00 ಲಕ್ಷ ರೂಪಾಯಿ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ 3797.00 ಲಕ್ಷ ರೂಪಾಯಿ ನಗರಾಭಿವೃದ್ಧಿ ಇಲಾಖೆ 2500.00 ಲಕ್ಷ ರೂಪಾಯಿ. ಒಟ್ಟು 7970.00 ಲಕ್ಷ ರೂಪಾಯಿ ಹಾನಿ ಆಗಿರುವುದಾಗಿ ಇಲಾಖೆಗಳಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ.

2025-26 ಸಾಲಿನಲ್ಲಿ ಪ್ರತಿ ಇಲಾಖೆಗೆ ಬಿಡುಗಡೆಯಾದ ಅನುದಾನ ಶೂನ್ಯವಾಗಿದೆ ಎಂದು ಪತ್ರದಲ್ಲಿ ಅವರು ಮನವರಿಕೆ ಮಾಡಿದ್ದಾರೆ. ಇನ್ನಷ್ಟು ಮಳೆ ಆಗುವ ಸಂಭವ ಇದ್ದು, ಹಾನಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈವರೆಗೆ ಪ್ರಸ್ತಾವನೆ ಸಲ್ಲಿಸಿದರೂ, 2025-26 ನೇ ಸಾಲಿಗೆ ಯಾವುದೇ ಅನುದಾನ ಬಿಡುಗಡೆ ಆಗಿರುವುದಿಲ್ಲ, ಇದರಿಂದಾಗಿ ರಸ್ತೆಗಳ ನಿರ್ವಹಣೆಯಲ್ಲಿ ಗಂಭೀರ ಅಡಚಣೆ ಎದುರಾಗಿದೆ ಎಂದವರು ತಿಳಿಸಿದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಸುಮಾರು 134.47 ಕೋಟಿಗೂ ಅಧಿಕ ಮೊತ್ತದ ಹಾನಿಯಾಗಿದ್ದು, ಹಾನಿಯಾದ ರಸ್ತೆಗಳು ಹಾಗೂ ಕಟ್ಟಡಗಳ ನಿರ್ವಹಣೆಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.