ಗಂಗಾ ಶುದ್ಧೀಕರಣದ ಭರವಸೆ ಮರೆತ ಮೋದಿ ಸರಕಾರ! – ಖರ್ಗೆಯ ಟೀಕೆ

Date:

spot_img

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡದ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಅವರು ಗುರುವಾರ ಎಕ್ಸ್‌ ಪೋಸ್ಟ್ ಮಾಡುತ್ತಾ, “ಮೋದಿ ಜಿ ಗಂಗಾ ಮಾತೆ ಎಂದು ಕರೆದರು, ಆದರೆ ಗಂಗಾ ಶುದ್ಧೀಕರಣದ ಭರವಸೆಯನ್ನು ಮರೆತಿದ್ದಾರೆ!” ಎಂದು ವಾಗ್ದಾಳಿ ನಡೆಸಿದರು.

2014ರಲ್ಲಿ ಆರಂಭವಾದ ನಮಾಮಿ ಗಂಗೆ ಯೋಜನೆ ಅಡಿಯಲ್ಲಿ 2026ರೊಳಗೆ 42,500 ಕೋಟಿ ರೂ. ವೆಚ್ಚ ಮಾಡಬೇಕಾಗಿತ್ತು. ಆದರೆ 2024 ಡಿಸೆಂಬರ್ ವರೆಗೆ ಕೇವಲ 19,271 ಕೋಟಿ ರೂ. ಮಾತ್ರ ಖರ್ಚಾಗಿದ್ದು, ಶೇಕಡಾ 55% ನಿಧಿ ಇನ್ನೂ ಬಳಕೆಯಾಗಿಲ್ಲ ಎಂದು ಸಂಸತ್ತಿನಲ್ಲಿ ಮಾಹಿತಿ ನೀಡಲಾಗಿದೆ. ಇದನ್ನು ಉಲ್ಲೇಖಿಸಿದ ಖರ್ಗೆ, “ಮಾ ಗಂಗೆಯ ಬಗ್ಗೆ ಇಷ್ಟೊಂದು ಅಸಡ್ಡೆ ಏಕೆ?” ಎಂದು ಪ್ರಧಾನಿ ನರೇಂದ್ರ ಮೋದಿಯನ್ನೇ ಪ್ರಶ್ನಿಸಿದ್ದಾರೆ.

ಇದೇ ವೇಳೆ, ಪ್ರಧಾನಿ ಮೋದಿ ಗುರುವಾರ ಬೆಳಗ್ಗೆ ಉತ್ತರಾಖಂಡದ ಉತ್ತರಕಾಶಿಯ ಮುಖ್ಯಾ ದೇವಸ್ಥಾನದಲ್ಲಿ ಗಂಗಾ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಗಂಗೋತ್ರಿ ಧಾಮದಿಂದ ಚಳಿಗಾಲದ ವೇಳೆಗೆ ವಿಗ್ರಹವನ್ನು ಸ್ಥಳಾಂತರಿಸುವ ಮುಖ್ಯಾ ಗಂಗಾ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ, “ಗಂಗಾ ಮಾತೆ ನನ್ನನ್ನು ದತ್ತು ತೆಗೆದುಕೊಂಡಿದ್ದಾಳೆ. ಆ ಆಶೀರ್ವಾದವೇ ನನ್ನನ್ನು ಕಾಶಿಗೆ ಕರೆದೊಯ್ದು ಜನರ ಸೇವೆ ಮಾಡಲು ಅವಕಾಶ ನೀಡಿತು” ಎಂದು ಭಾವುಕರಾಗಿ ಪ್ರತಿಕ್ರಿಯಿಸಿದರು.

ಮೋದಿಯ ಈ ಹೇಳಿಕೆ ಮತ್ತು ಖರ್ಗೆಯ ಟೀಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.