ಭಾರತ-ಪಾಕಿಸ್ತಾನ ಕದನ ವಿರಾಮದ ಮಾತುಕತೆಯಲ್ಲಿ ಅಮೆರಿಕದ ಪಾತ್ರವಿಲ್ಲ: ಟ್ರಂಪ್ ಗೆ ಮೋದಿ ಸ್ಪಷ್ಟನೆ

Date:

spot_img

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದ ಬಗ್ಗೆ ಅಮೆರಿಕದ ಯಾವುದೇ ಪಾತ್ರವಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಸಂಭಾಷಣೆಯ ವೇಳೆ ಸ್ಪಷ್ಟಪಡಿಸಿದ್ದಾರೆ.

ಟ್ರಂಪ್ ಅವರ ಕೋರಿಕೆಯಲ್ಲಿ 35 ನಿಮಿಷಗಳ ಕಾಲ ನಡೆದ ಈ ಮಾತುಕತೆಯಲ್ಲಿ, “ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಯಾವುದೇ ಪಾತ್ರವಹಿಸಿಲ್ಲ . ಯುದ್ಧದ ಸಮಯದಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಯಾವುದೇ ಚರ್ಚೆಯೂ ನಡೆದಿಲ್ಲ,” ಎಂದು ಮೋದಿ ಹೇಳಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ ಮಾಹಿತಿ ನೀಡಿದ್ದಾರೆ.

ಭಾರತವು ಮೇ 7 ರಂದು ಆರಂಭಿಸಿದ ಆಪರೇಷನ್ ಸಿಂದೂರ್ ನಂತರ ಇಬ್ಬರು ನಾಯಕರು ಮೊದಲ ಬಾರಿಗೆ ಮಾತನಾಡಿದ್ದು, ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಮತ್ತು ಟ್ರಂಪ್ ನಡುವೆ ನಡೆದ ಸಭೆಗೆ ಕೆಲವೇ ಗಂಟೆಗಳ ಮೊದಲು ಈ ಕರೆ ನಡೆದಿತ್ತು.

ಕದನ ವಿರಾಮ ಮಾತುಕತೆ ನೇರವಾಗಿ ಭಾರತ ಮತ್ತು ಪಾಕಿಸ್ತಾನ ನಡುವೆಯೇ ನಡೆದಿದ್ದು, ಯಾವುದೇ ತೃತೀಯ ಪಕ್ಷದ ಮಧ್ಯಸ್ಥಿಕೆ ಇಲ್ಲವೆಂಬುದಾಗಿ ಮೋದಿ ಅವರು ಸ್ಪಷ್ಟಪಡಿಸಿದರು. “ಭಾರತವು ಈಗ ಭಯೋತ್ಪಾದಕ ಕೃತ್ಯಗಳನ್ನು ಯುದ್ಧದ ಕೃತ್ಯಗಳಾಗಿ ಪರಿಗಣಿಸುತ್ತಿದೆ,” ಎಂದು ಅವರು ತಿಳಿಸಿದ್ದಾರೆ.

ಟ್ರಂಪ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿಯಾಗಲು ಆಹ್ವಾನಿಸಿದ್ದರೂ, ಈಗಾಗಲೇ ನಿಗದಿಯಾಗಿರುವ ಪ್ರಯಾಣದ ವೇಳಾಪಟ್ಟಿಯ ಕಾರಣದಿಂದ ಮೋದಿ ಭೇಟಿ ಸಾಧ್ಯವಾಗಲಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಶೀಘ್ರದಲ್ಲೇ ಇಬ್ಬರೂ ಮುಖಾಮುಖಿ ಭೇಟಿ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಮಿಸ್ತ್ರಿ ತಿಳಿಸಿದ್ದಾರೆ.

ಜೀ7 ಶೃಂಗಸಭೆಗಾಗಿ ಪ್ರಧಾನಿ ಮೋದಿ ಕೆನಡಾ ತಲುಪುವ ಮುನ್ನವೇ ಟ್ರಂಪ್ ಅಲ್ಲಿಂದ ಹೊರಟಿದ್ದರು. ಈ ಕಾರಣದಿಂದಾಗಿ ನಿರೀಕ್ಷಿತ ಮುಖಾಮುಖಿ ಭೇಟಿಗೆ ಸಾಧ್ಯವಾಗಲಿಲ್ಲ. ಈ ವರೆಗೆ ಟ್ರಂಪ್ ಪದೇ ಪದೇ “ಕದನ ವಿರಾಮಕ್ಕೆ ನಾನು ಮಧ್ಯಸ್ಥಿಕೆ ವಹಿಸಿದ್ದೇನೆ ಮತ್ತು ವ್ಯಾಪಾರವನ್ನು ಕಡಿತಗೊಳಿಸುವ ಬೆದರಿಕೆಯನ್ನು ಹಾಕಿ ಯುದ್ಧ ನಿಲ್ಲುವಂತೆ ಮಾಡಿದ್ದೇನೆ ” ಎಂಬುದಾಗಿ ಹೇಳಿಕೊಂಡಿದ್ದರು. ಆದ್ದರಿಂದ ಮೋದಿಯವರ , ಈ ಸ್ಪಷ್ಟನೆ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.