
ಮೂಡುಬಿದಿರೆ: ಇಲ್ಲಿನ ಗಂಟಾಲ್‌ಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಯ ಮೇಲೆ ಪೊಲೀಸರು ದಾಳಿ ನಡೆಸಿ, ಮೂರು ದನಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಲೀಲ್ ಕಲ್ಲಬೆಟ್ಟು ಎಂಬಾತನ ಮನೆಯ ಹಿಂಭಾಗದ ಗುಡ್ಡದಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ದಾಳಿ ನಡೆಸಿದ ಸಂದರ್ಭದಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ಸುಮಾರು 50 ಕೆ.ಜಿ. ದನದ ಮಾಂಸ ಮತ್ತು ಅದನ್ನು ಕತ್ತರಿಸಲು ಬಳಸಿದ ಸೊತ್ತುಗಳನ್ನು ಹಾಗೂ ಮಾಂಸವನ್ನು ಕೊಂಡೊಯ್ಯಲು ಬಂದಿದ್ದ ಎರಡು ಕಾರುಗಳನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಲ್ವರು ಆರೋಪಿಗಳು ಪರಾರಿ
ಈ ಪ್ರಕರಣದಲ್ಲಿ ಆರೋಪಿಗಳಾದ ಜಲೀಲ್ ಕಲ್ಲಬೆಟ್ಟು, ಸಾಹಿಲ್ ಮತ್ತು ಆತನ ಮಗ ಸೊಹೇಲ್, ಹಾಗೂ ಕುದ್ರೋಳಿ ನಿವಾಸಿ ಮುಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಪೊಲೀಸರು ದಾಳಿ ಮಾಡುತ್ತಿದ್ದಂತೆ ಆರೋಪಿಗಳು ಮನೆಯ ಹಿಂಬದಿಯ ಗುಡ್ಡದ ಮೂಲಕ ಓಡಿ ಪರಾರಿಯಾಗಿದ್ದಾರೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



































